
ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕರಾಗಿ (Addl SP) ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಇ. ತಿಮ್ಮಯ್ಯ (58 ವರ್ಷ) ಅವರು ಇಂದು ಮುಂಜಾನೆ 1 ಗಂಟೆಗೆ ನಿಧನರಾಗಿದ್ದಾರೆ.
ಅವರು ಶ್ವಾಸಕೋಶದ ಕ್ಯಾನ್ಸರ್ (Lung Cancer) ನಿಂದ ಬಳಲುತ್ತಿದ್ದು, ಮಂಡ್ಯದ ಸ್ಪಂದನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಅತ್ಯಂತ ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದ ತಿಮ್ಮಯ್ಯ ಅವರು ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಅಂತಿಮ ದರ್ಶನ:
ಇಂದು ಮಧ್ಯಾಹ್ನ 3 ಗಂಟೆಯವರೆಗೆ ಮಂಡ್ಯದ ನೀರಾವರಿ ಇಲಾಖೆ ಕ್ವಾಟ್ರಸ್, ಅಶೋಕನಗರ, ವಿ.ವಿ. ರಸ್ತೆ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅಂತ್ಯಕ್ರಿಯೆ:
ಇಂದು ಸಂಜೆ ಮೈಸೂರಿನ ವಿಜಯನಗರದ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




