Kannada NewsKarnataka NewsLatest

*ಮಹಿಷ ದಸರಾ ಆಚರಣೆಗೆ ಪೊಲೀಸರಿಂದ ನಿರ್ಬಂಧ*: *ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ: ಅರಮನೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೊಂದೆಡೆ ಕೆಲ ಸಂಘಟನೆಗಳು ಮಹಿಷ ದಸರಾ ಆಚರಣೆ ಆರಂಭಿಸಲು ಮುಂದಾಗಿವೆ. ಆದರೆ ಈ ಬಾರಿ ಪೊಲೀಸರು ಮಹಿಷ ದಸರಾ ಆಚರಣೆಗೆ ಅವಕಾಶ ನೀಡಿಲ್ಲ.

ಒಂದೆಡೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನವರತರಿ ಸಂಭ್ರಮ, ದಸರಾ ಮಹೋತ್ಸವಕ್ಕೆ ಕೊನೇ ಕ್ಷಣ ಸಿದ್ಧತೆ ನಡೆಯುತ್ತಿದ್ದರೆ ಮತ್ತೊಂದೆಡೆ ಮಹಿಷ ದಸರಾ ಆಚರಣೆಗೆ ಕೆಲ ಸಂಘಟನೆಗಳು ಮುಂದಾಗಿದ್ದವು. ಆದರೆ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.

ಮೈಸೂರಿನಲ್ಲಿ ಮಹಿಷ ದಸರಾ ಆಚರಣಾ ಸಮಿತಿ ಮಹಿಷ ದಸರಾ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿತ್ತು. ಆದರೆ, ಚಾಮುಂಡಿ ಬೆಟ್ಟದಲ್ಲಿ ಆಚರಣೆಗೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರ ಪ್ರತಿಮೆ ಬಳಿ ಸುತ್ತಮುತ್ತಲೂ ನಿಷೇಧಾಜ್ಞೆ ಜಾರಿ ಗೊಳಿಸಲಾಗಿದ್ದು, ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ನಗರದ ಪುರಭವನದಲ್ಲಿ ಮಹಿಷ ದಸರಾ ಆಚರಣೆಗೆ ಅವಕಾಶ ನೀಡಲಾಗಿದೆ.

ದಸರಾ ಸಂದರ್ಭದಲ್ಲಿ ಪ್ರವಾಸಿಗರಿಗೆ ತೊಂದರೆಯಾಗುವ ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button