
ಪ್ರಗತಿವಾಹಿನಿ ಸುದ್ದಿ: ಎಸ್ಐಆರ್ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಮುಖ್ಯ ಚುನವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಇಂದು ಕರೆ ನೀಡಿರುವ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಸಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಜೆಪಿ ಪ್ರತಿಭಟನೆಗೆ ಅನುಮತಿ ನಿರಾಕರಿಸಿರುವ ಪೊಲೀಸರು ಇದೀಗ ಅಲರ್ಟ್ ಆಗಿದ್ದು, ವಿಮಾನದೊಳಗೇ ಸಿಜೆಪಿ ನಾಯಕರನ್ನು ಸಿನಿಮೀಯ ರೀತಲ್ಲಿ ಪೊಲೀಸರು ವಶಕ್ಕೆ ಪಡೆದು ಬೇರೆಡೆ ಕರೆದೊಯ್ದಿದ್ದಾರೆ.
ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಮುಂಬೈನಿಂದ ದೆಹಲಿಗೆ ಆಗಮಿಸಿದ್ದ ವೇಳೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ನುಗ್ಗಿದ ಪೊಲೀಸರು ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ, ಸೌರವ್ ದಾಸ್, ಅಶುತೋಷ್ ರಾಂಕಾ ಅವರನ್ನು ವಶಕ್ಕೆ ಪಡೆದರು.
ಇದಕ್ಕೂ ಮುನ್ನ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆಗೆ ತೆರಳು ಸಿದ್ಧರಾಗಿದ್ದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಯವರನ್ನು ಗುರುಗ್ರಾಮದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧ್ರುವ್ ರಾಠಿ ಸೇರಿ ಹಲವರನ್ನು ಗುರುಗ್ರಾಮದ ಅವರ ಮನೆಯಲ್ಲಿಯೇ ವಶಕ್ಕೆ ಪಡೆಯಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




