*ಕೆ.ಎಸ್.ಆರ್.ಟಿ.ಸಿಯಿಂದ ದಸರಾ ವಿಶೇಷ ಬಸ್ ಸೌಲಭ್ಯ*: *ರಾಜ್ಯದ ವಿವಿಧ ಭಾಗಗಳಿಗೆ ರಿಯಾಯ್ತಿ ದರದಲ್ಲಿ ಟಿಕೆಟ್ ವ್ಯವಸ್ಥೆ*

ಪ್ರಗತಿವಾಹಿನಿ ಸುದ್ದಿ: ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ರಾಜ್ಯದ ವಿವಿಧ ಭಾಗಗಳಿಗೆ ವಿಶೇಷ ಬಸ್ ಸೇವೆ ಕಲ್ಪಿಸುತ್ತಿದೆ.
ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯದ ವಿವಿಧ ಸ್ಥಳಗಳಿಗೆ 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ ನಡೆಸಲಿವೆ. ಆನ್‌ಲೈನ್‌ನಲ್ಲಿ ಮುಂಗಡ ಬುಕಿಂಗ್ ಲಭ್ಯವಿದ್ದು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರಿಗೆ ಶೇ.5 ಮತ್ತು ಹೋಗಿ-ಬರುವ ಟಿಕೆಟ್ ಕಾಯ್ದಿರಿಸಿದರೆ ಶೇ.10 ರಿಯಾಯಿತಿ ಕೂಡ ದೊರೆಯಲಿದೆ.
ಅಕ್ಟೋಬರ್ 16 ರಿಂದ 20ವರೆಗೂ (5 ದಿನಗಳು) ಬೆಂಗಳೂರಿನಿಂದ ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ 3,000ಕ್ಕೂ ಅಧಿಕ ವಿಶೇಷ ಬಸ್‌ಗಳು ಸಂಚರಿಸಲಿವೆ.
ಹಬ್ಬದ ರಜೆ ಮುಗಿಸಿ ವಾಪಸ್ಸಾಗುವ ಪ್ರಯಾಣಿಕರಿಗಾಗಿ ದಿನಾಂಕ ಅಕ್ಟೋಬರ್ 20, 21 ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್‌ಗಳ ಕಾರ್ಯಾಚರಣೆ ಇರಲಿದೆ.
ಪ್ರಮುಖ ನಿಲ್ದಾಣಗಳು: ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್), ಮೈಸೂರು ರಸ್ತೆ ಬಸ್ ನಿಲ್ದಾಣ (ಸ್ಯಾಟಲೈಟ್) ಹಾಗೂ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣ.
ಮುಂಗಡ ಆಸನ ಕಾಯ್ದಿರಿಸಿದ ಬಸ್‌ಗಳು: ಪ್ರಯಾಣಿಕರ ದಟ್ಟಣೆಯನ್ನು ತಪ್ಪಿಸಲು ಮುಂಗಡ ಬುಕಿಂಗ್ ಮಾಡಲಾದ ಬಸ್‌ಗಳನ್ನು ವಿಜಯನಗರ TTMC, ಯಶವಂತಪುರ TTMC, ಜಯನಗರ TTMC, ಬನಶಂಕರಿ TTMC, ಬಸವೇಶ್ವರನಗರ ಬಸ್ ನಿಲ್ದಾಣ, ದೊಮ್ಮಲೂರು ಬಸ್ ನಿಲ್ದಾಣಗಳಿಂದ ಕಾರ್ಯಾಚರಿಸಲಾಗುತ್ತದೆ.
ಮೈಸೂರು ದಸರಾಕ್ಕಾಗಿ 700 ಬಸ್‌ಗಳು:
ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 300 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ. ಮೈಸೂರಿನಿಂದ ಸುತ್ತಮುತ್ತಲಿನ ಪ್ರೇಕ್ಷಣೀಯ/ಧಾರ್ಮಿಕ ಸ್ಥಳಗಳಾದ ಚಾಮುಂಡಿಬೆಟ್ಟ, ಕೆ.ಆರ್.ಎಸ್/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಮುಂತಾದ ಕಡೆಗಳಿಗೆ ಸಂಪರ್ಕ ಕಲ್ಪಿಸಲು 400 ಬಸ್‌ಗಳನ್ನು ಮೀಸಲಿಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ನೇರವಾಗಿ ‘ಫ್ಲೈ ಬಸ್’ ಹವಾನಿಯಂತ್ರಿತ ಬಸ್ ಲಭ್ಯವಿರಲಿದೆ.
ಈ ಊರುಗಳಿಗೆ ವಿಶೇಷ ಬಸ್ :
ಮಂಗಳೂರು, ಉಡುಪಿ, ಕುಂದಾಪುರ, ಪುತ್ತೂರು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ದಾವಣಗೆರೆ, ಗೋಕರ್ಣ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳು.
ನೆರೆರಾಜ್ಯಗಳ ನಗರಗಳಾದ ಹೈದರಾಬಾದ್, ವಿಜಯವಾಡ, ನೆಲ್ಲೂರು, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿರಾಪಳ್ಳಿ, ಕುಂಭಕೋಣಂ, ಕೊಯಮತ್ತೂರು, ಮಧುರೈ, ಪಣಜಿ, ಮಂತ್ರಾಲಯ, ಪುಣೆ, ಎರ್ನಾಕುಲಂ, ಪಾಲ್ಘಾಟ್ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.
ಪ್ರಯಾಣಿಕರು www.ksrtc.karnataka.gov.in ಅಥವಾ ಮೊಬೈಲ್ ಆ್ಯಪ್ ಮೂಲಕ ಇ-ಟಿಕೆಟ್ ಬುಕ್ ಮಾಡಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




