Kannada NewsKarnataka NewsLatest

*ಗ್ರಾಮ ಪಂಚಾಯತಿ ಸಿಬ್ಬಂದಿಯ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿದ ವಿಮಾ ಕಂಪನಿ ಸಿಬ್ಬಂದಿ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ಸರ್ವೆಗೆ ಬಂದಿದ್ದ ವಿಮಾ ಕಂಪನಿ ಸಿಬ್ಬಂದಿ ಗ್ರಾಮ ಪಂಚಾಯತಿ ಸಿಬ್ಬಂದಿಯ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿಸಿ ಅಮಾನಿಸಿರುವ ಘಟನೆ ನಡೆದಿದೆ.

ಗ್ರಾಮ ಪಂಚಾಯತಿ ಸದಸ್ಯರ ಜೊತೆ ವಿಮಾ ಕಂಪನಿ ಸಿಬ್ಬಂದಿಯ ಅಮಾನವೀಯ ಕೃತ್ಯಕ್ಕೆ ಗ್ರಾಮಸ್ಥರು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ವಿಮಾ ಕಂಪನಿ ಸಿಬ್ಬಂದಿಗಳು ಗ್ರಾಮ ಪಂಚಾಯತಿ ಕಾರ್ಯದರ್ಶಿ ಪಕ್ಕೀರಪ್ಪ ಯತ್ನಳ್ಳಿ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿಸಿದ್ದಾರೆ.

ಜಮೀನಿನಲ್ಲಿ ನೀರು ತುಂಬಿದ್ದರಿಂದ, ಈಗಾಗಲೇ ಸ್ಥಳ ಪರಿಶೀಲನೆ ನಡೆಸಿ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿದೆ. ಆದರೂ, ಗ್ರಾಮ ಪಂಚಾಯತಿ ಸಿಬ್ಬಂದಿಯ ಪ್ಯಾಂಟ್ ಬಿಚ್ಚಿಸಿ ಸರ್ವೆ ಮಾಡಿಸಿ ಅವಮಾನಿಸಲಾಗಿದೆ. ನಿಯಮಗಳನ್ನು ಪಾಲಿಸದೆ, ಮನಬಂದಂತೆ ಸರ್ವೆ ನಡೆಸಿದ ವಿಮಾ ಕಂಪನಿ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button