Belagavi NewsBelgaum NewsCrimeKannada NewsKarnataka NewsTravel

*ಬೆಳಗಾವಿಯಲ್ಲಿ ದುರ್ಗಾಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ; ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದುರ್ಗಾಮಾತಾ ದೌಡ ದೇವಿ ಮೂರ್ತಿಯ ಮೆರವಣಿಗೆ ವೇಳೆ ಹಿಂಬದಿಯಿಂದ ಬಂದ ಟ್ರಕ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. 

ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಏಳು ಜನರ ಸ್ಥಿತಿ ಚಿಂತಾಜನಕವಾಗಿದೆ. ಹುಕ್ಕೇರಿ ತಾಲೂಕಿನ ಮಣಗುತ್ತಿ ಹಾಗೂ ಹತ್ತರಗಿ ಟೋಲ್‌ಗೇಟ್ ಸಮೀಪ ಭಾನುವಾರ ಈ ದುರ್ಘಟನೆ ನಡೆದಿದೆ. ಹುಂಚ್ಯಾನಟ್ಟಿ ಗ್ರಾಮದಿಂದ ಬೆಳಗಾವಿಗೆ ತರಲಾಗಿದ್ದ ದುರ್ಗಾಮಾತಾ ದೌಡ ದೇವಿ ಮೂರ್ತಿಯನ್ನು ಮತ್ತೆ ಹುಂಚ್ಯಾನಟ್ಟಿ ಗ್ರಾಮಕ್ಕೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿತ್ತು.

ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಟ್ರಕ್ ಮೆರವಣಿಗೆಯಲ್ಲಿದ್ದವರ ಮೇಲೆ ಹರಿದಿದೆ. ಘಟನೆಯ ತೀವ್ರತೆಗೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಮೃತರನ್ನು ಪ್ರಕಾಶ, ಮಹೇಶ್ ಹಾಗೂ ದಾನೇಶ್ವರಿ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಬೆಳಗಾವಿ ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಗಾಯಗೊಂಡವರ ಸಂಪೂರ್ಣ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button