Kannada NewsKarnataka NewsPolitics

*ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ವಾಟ್ಸಪ್ ಸ್ಟೇಟಸ್ ಮೂಲಕ ಟಾಂಗ್ ಕೊಟ್ರಾ ಡಿಸಿ ಲತಾಕುಮಾರಿ*

ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದು, ಇದೀಗ ವಾಟ್ಸಪ್ ಸ್ಟೇಟಸ್ ಮೂಲಕ ಡಿಸಿ ಲತಾಕುಮಾರಿ ಟಾಂಗ್ ನೀಡಿದ್ದಾರೆ ಎನ್ನಲಾಗುತ್ತಿದೆ.

ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಅವರು ತಮ್ಮ ವಾಟ್ಸಪ್‌ ಸ್ಟೇಟಸ್‌‌ನಲ್ಲಿ ರಾಷ್ಟ್ರ ಲಾಂಛನ, ಧ್ಯೇಯವಾಕ್ಯ ʻಸತ್ಯಮೇವ ಜಯತೇʼ (ಸತ್ಯವೇ ಗೆಲ್ಲುವುದು) ಜೊತೆಗೆ ಎರಡು ಸಾಲುಗಳನ್ನ ಹಾಕಿಕೊಳ್ಳುವ ಮೂಲಕ ಹೆಚ್.ಡಿ ಕುಮಾರಸ್ವಾಮಿ‌ ಅವರಿಗೆ ತಿರುಗೇಟು ನೀಡಿದರೇ ಎಂಬ ಚರ್ಚೆ ಆರಂಭವಾಗಿದೆ.

ಲತಾಕುಮಾರಿ ಅವರು, ನೀವು ನನ್ನ ಮೇಲೆ ಸುಳ್ಳಿನ ದಾಳಿ ಮಾಡಬಹುದು ಆದರೆ ನೀವು ನನ್ನನ್ನು ಸುಳ್ಳಿನಿಂದ ಕುಗ್ಗಿಸಲು (ದುರ್ಬಲಗೊಳಿಸಲು) ಸಾಧ್ಯವಿಲ್ಲ. ಸುಳ್ಳು ದಾಳಿ ಮಾಡಿದ್ರೆ ಸತ್ಯ ರಕ್ಷಣೆ ಮಾಡುತ್ತೆ ಎಂದು ತಮ್ಮ ವೈಯುಕ್ತಿಕ ನಂಬರ್‌ನ ವಾಟ್ಸಪ್‌‌ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಾರೆ.

ಶನಿವಾರವಷ್ಟೇ ಹೆಚ್.ಡಿ.ಕುಮಾರಸ್ವಾಮಿ, ಹಾಸನ ಜಿಲ್ಲಾಧಿಕಾರಿ ಹುದ್ದೆಯಲಿರುವ ಮಹಿಳೆ ಕೆಪಿಎಸ್ಸಿಯಲ್ಲಿ ಏನೇನು ಮಾಡಿದ್ದಾರೆ ಎಂಬುದು ದಾಖಲೆ ಸಮೇತ ಸಾಬೀತಾಗಿದೆ. ಆದರೂ ಅಲ್ಲಿ ಅಕ್ರಮ ಎಸಗಿದ ಇವರನ್ನು ಇಲ್ಲಿ ಜಿಲ್ಲಾಧಿಕಾರಿ ಸ್ಥಾನದಲ್ಲಿ ಕೂರಿಸಿದ್ದಾರೆ. ಅವತ್ತೇ ಅವರನ್ನು ರಜೆಯ ಮೇಲೆ ಕಳಿಸಿ ಸಸ್ಪೆಂಡ್ ಮಾಡಬೇಕಾಗಿತ್ತು ಎಂದು ಕಿಡಿಕಾರಿದ್ದರು. ಇದರ ಬೆನ್ನಲ್ಲೇ ಡಿಸಿ ವಾಟ್ಸಪ್ ಸ್ಟೇಟಸ್ ನಲ್ಲಿರುವ ಪೋಸ್ಟ್ ಚರ್ಚೆಗೆ ಕಾರಣವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button