Kannada NewsLatestNational

*BREAKING: ಇಂಡಿಗೋ ವಿಮಾನದಲ್ಲಿ ಬೆಂಕಿ ಅವಘಡ*: *ಕಂಗಾಲಾದ ಪ್ರಯಾಣಿಕರು*

ಪ್ರಗತಿವಾಹಿನಿ ಸುದ್ದಿ: ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕಂಗಾಲಾಗಿರುವ ಘಟನೆ ನಡೆದಿದೆ. ಕೂಡಲೇ ಪೈಲಟ್ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬ್ಯಾಗ್ ನಲ್ಲಿದ್ದ ಪವರ್ ಬ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರೆಲ್ಲ ಆತಂಕಗೊಂಡು ಎದ್ದು ನಿಂತಿದ್ದಾರೆ. ಬೆಂಕಿ ನಂಡಿಸಲು ಯತ್ನಿಸಿದ್ದಾರೆ.

ದೆಹಲಿಯಿಂದ ಚೆನ್ನೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದೆ. ಬಳಿಕ ಪೈಲಟ್ ವಿಮಾನವನ್ನು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಪ್ರಯಾಣಿಕರನ್ನು ಹೊರಗಿಳಿಸಿ ಪರಿಶೀಲನೆ ನಡೆಸಲಾಯಿತು. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭಸಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button