Kannada NewsLatestNationalPolitics

*ಮತದಾರರ ಪಟ್ಟಿಯಲ್ಲಿ ಕ್ರಾಂತಿವೀರ ಭಗತ್ ಸಿಂಗ್ ಫೋಟೋ ಪ್ರತ್ಯಕ್ಷ*: *ಚುನಾವಣಾ ಅಧಿಕಾರಿಗಳ ಎಡವಟ್ಟು: ಭುಗಿಲೆದ್ದ ಆಕ್ರೋಶ

ಪ್ರಗತಿವಾಹಿನಿ ಸುದ್ದಿ: ಎಸ್ಐಆರ್ ಪ್ರಕ್ರಿಯೆಯಲ್ಲಿ ಸಾಲು ಸಾಲು ಅಕ್ರಮಗಳು ಬೆಳಕಿಗೆ ಬರುತ್ತಿವೆ. ಚುನಾವಣಾ ಅಧಿಕಾರಿಗಳ ಎಡವಟ್ಟಿಗೆ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕ್ರಾಂತಿವೀರ ಭಗತ್ ಸಿಂಗ್ ಅವರ ಫೋಟೋ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದು, ಈ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ.

ಚುನಾವಣಾ ಆಯೋಗದ ತಾಂತ್ರಿಕ ದೋಷವೋ ಅಥವಾ ಅಧಿಕಾರಿಗಳ ಎಡವಟ್ಟಿನಿಂದಾಗಿಯೋ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಅವರ ಭಾವಚಿತ್ರ ಪ್ರತ್ಯಕ್ಷವಾಗಿದ್ದು, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಈ ಘಟನೆ ಪಂಜಾಬ್‌ನ ಲುಧಿಯಾನದಲ್ಲಿ ನಡೆದಿದೆ. ಲುಧಿಯಾನದ ಮತದಾರರ ಪಟ್ಟಿಯ 422ನೇ ಸಂಖ್ಯೆಯ ಮತದಾರನಿಗೆ ಭಗತ್ ಸಿಂಗ್ ಅವರ ಫೋಟೋವನ್ನು ಅಳವಡಿಸಲಾಗಿತ್ತು. ಈ ತಾಂತ್ರಿಕ ಎಡವಟ್ಟಿನಿಂದಾಗಿ ವಿಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಈ ಕುರಿತು ಸ್ಪಷ್ಟನೆ ನೀಡಿರುವ ಚುನಾವಣಾ ಆಯೋಗ, ಈ ತಪ್ಪನ್ನು ಈಗಾಗಲೇ ಸರಿಪಡಿಸಲಾಗಿದೆ ಎಂದು ತಿಳಿಸಿದೆ. ಆದಾಗ್ಯೂ, ಈ ಘಟನೆ ವಿಪಕ್ಷಗಳಿಗೆ ಚುನಾವಣಾ ಆಯೋಗದ ಕಾರ್ಯವೈಖರಿ ವಿರುದ್ಧ ವಾಗ್ದಾಳಿ ನಡೆಸಲು ಮತ್ತೊಂದು ಅಸ್ತ್ರವಾದಂತಾಗಿದೆ.

ನವದೆಹಲಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ,ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಆರ್‌ಎಸ್‌ಎಸ್ ಕಚೇರಿಗಳಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಈ ವಿಚಾರದಲ್ಲಿ ಏನನ್ನೂ ಮಾಡಲು ಸಿದ್ಧವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಹಾವಿನಪುರದಲ್ಲಿಯೂ ಮತದಾರರ ಪಟ್ಟಿ ಸಿದ್ಧವಾಗುತ್ತಿದೆ ಎಂದು ಅವರು ಹೇಳಿಕೆ ನೀಡಿದ್ದಾರೆ. ಲುಧಿಯಾನದ ಈ ಮತದಾರರ ಪಟ್ಟಿ ಎಡವಟ್ಟು, ಚುನಾವಣಾ ಪ್ರಕ್ರಿಯೆಗಳ ಪಾರದರ್ಶಕತೆ ಮತ್ತು ನಿಖರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಕಿಡಿಕಾರಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button