Kannada NewsKarnataka NewsLatest

*BREAKING: ಭೀಕರ ಅಪಘಾತ*: *ಹಿಟ್ & ರನ್ ಗೆ ಶಿಕ್ಷಕಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಹಿಟ್ ಆಂಡ್ ರನ್ ಗೆ ವಾಕಿಂಗ್ ಗೆ ಹೋಗಿದ್ದ ಶಿಕ್ಷಕಿಯೊಬ್ಬರು ಮೃತಪಟ್ಟಿರುವ ಘಟನೆ ನಾಡೆದಿದೆ.

ವಾಕಿಂಗ್ ಗೆ ಹೋಗುತ್ತಿದ್ದ ಶಿಕ್ಷಕಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಶಿಕ್ಷಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ಕಾರಿನ ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆಯ ಗಂಗಮ್ಮ ದೇವಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ರೂಪಾ (41) ಮೃತ ಶಿಕ್ಷಕಿ. ಅವರು ಶಕ್ತಿಧಾಮ ಲೇಔಟ್ ನಿವಾಸಿ ಪ್ರೊ.ಅವೀಶ್ ಪತ್ನಿ. ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button