*ಸಚಿವರೂ ಸೇರಿ ಕಾಂಗ್ರೆಸ್ ನ 25 ಶಾಸಕರು ಬಿಜೆಪಿಗೆ ಸೇರ್ತಾರೆ*: *ಹೊಸ ಬಾಂಬ್ ಸಿಡಿಸಿದ ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದ ಸಚಿವರೂ ಸೇರಿ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ವಿಜಯೇಂದ್ರ, ನಾಳೆಯೇ ವಿಧಾನಸಭೆ ಚುನಾವಣೆ ಘೋಷಣೆಯಾದರೆ 20 ರಿಂದ 25 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರೋಕೆ ಸಿದ್ಧರಿದ್ದಾರೆ ಎಂದು ತಿಳಿಸಿದ್ದಾರೆ.
ನಾವು ಯಾರನ್ನೂ ಸೆಳೆಯುತ್ತಿಲ್ಲ. ಆದ್ರೆ ನಾಳೆಯೇ ಚುನಾವಣೆ ಘೋಷಣೆಯಾದರೆ 25 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ. ಅದೂ ಸಚಿವರನ್ನ ಒಳಗೊಂಡು. ಅಂಥ ವಾತಾವರಣ ಈಗ ಸೃಷ್ಟಿಯಾಗಿದೆ. ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ನಲ್ಲಿ ನಂಬಿಕೆ ಕಳೆದುಕೊಂಡಿದ್ದಾರೆ. ಆಡಳಿತ ಪಕ್ಷದಲ್ಲೇ ಸಿಎಂ ಮೇಲೆ ವಿಶ್ವಾಸವಿಲ್ಲದಂತಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ನಲ್ಲಿ ಕೆಲವರು ಅಧಿಕಾರ ಕಸಿದುಕೊಳ್ಳಲು ಸ್ಟಿಂಗ್ ಆಪರೇಷನ್ ಮಾಡಿದ್ದಾರೆ ಅಂತ ಚರ್ಚೆ ನಡೀತಿದೆ. ಅಧಿಕಾರಕ್ಕಾಗಿ ಸ್ಟಿಂಗ್ ಆಪರೇಷನ್ ಮಾಡಿಸೋದು ರಾಜಕೀಯ ವ್ಯಭಿಚಾರ.
ಸ್ಟಿಂಗ್ ಆಪರೇಷನ್ ನಂತಹ ಬೆಳವಣಿಗೆ ಕರ್ನಾಟಕದ ರಾಜಕೀಯದ ದೃಷ್ಟಿಯಿಂದ ಒಳ್ಳೆಯದಲ್ಲ. ಯಾರು ಯಾರ ವಿರುದ್ಧ ಸ್ಟಿಂಗ್ ಮಾಡಿದ್ದಾರೆ ಎಲ್ಲವೂ ಮುಂದೆ ಬಹಿರಂಗವಾಗಲಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




