
ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವ ಸಂಪುಟ ಪುನಾರಚನೆಯ ಮಾತುಗಳು ಕೇಳಿಬರುತ್ತಿವ ಬೆನ್ನಲ್ಲೆ ಕೇಂದ್ರ ಸಚಿವ ಎಲ್.ಮುರುಗನ್ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿದ ಎಲ್. ಮುರುಗನ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ತಮಿಳುನಾಡಿನಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ನಿರ್ಧರಿಸಿರುವುದಾಗಿ ಮುರುಗನ್ ತಿಳಿಸಿದ್ದಾರೆ. ಸುದೀರ್ಘ ರಾಜೀನಾಮೆ ಪತ್ರ ಬರೆದಿರುವ ಮುರುಗನ್, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಮಾತೆಗೆ ಹಾಗೂ ತಮಿಳುನಾಡಿಗೆ ಸೇವೆ ಸಲ್ಲಿಸಿದ್ದು ತಮ್ಮ ಜೀವನದ ಅತ್ಯಂತ ಶ್ರೇಷ್ಠ ಗೌರವ ಎಂದು ಅವರು ಬಣ್ಣಿಸಿದ್ದಾರೆ.
“ದಿನಗೂಲಿ ಕಾರ್ಮಿಕರ ಮಗನಾಗಿ ಬೆಳೆದು, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇಂದ್ರ ಸಚಿವರ ಮಂಡಳಿಯಲ್ಲಿ ಸೇವೆ ಸಲ್ಲಿಸಿದ್ದು ನನ್ನ ಜೀವನದ ಅತಿ ದೊಡ್ಡ ಭಾಗ್ಯ ಮತ್ತು ಗೌರವ” ಎಂದು ಹೇಳಿದ್ದಾರೆ.
2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲು, ಕಾರ್ಯಕರ್ತರೊಂದಿಗೆ ನಿಂತು ಪೂರ್ಣಾವಧಿಯಾಗಿ ಕೆಲಸ ಮಾಡಲು ಬಯಸಿರುವುದಾಗಿ ತಮ್ಮ ರಾಜೀನಾಮೆ ಪತ್ರದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.
ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷರೂ ಆಗಿರುವ ಎಲ್. ಮುರುಗನ್ ಅವರ ಈ ನಿರ್ಧಾರವು ತಮಿಳುನಾಡು ರಾಜಕೀಯದಲ್ಲಿ ಹಾಗೂ ಮುಂಬರುವ ಚುನಾವಣಾ ತಂತ್ರಗಾರಿಕೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




