CrimeKannada NewsKarnataka NewsLatest

*ಕಳ್ಳತನ ಸೇರಿ ಹಲವು ಪ್ರಕರಣಗಳ ಆರೋಪಿಯ ಬರ್ಬರ ಹತ್ಯೆ*: *ದುಷ್ಕರ್ಮಿಗಳು ಎಸ್ಕೇಪ್*

ಪ್ರಗತಿವಾಹಿನಿ ಸುದ್ದಿ: ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. ‌ಮೃತ ವ್ಯಕ್ತಿ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು ಘಟನೆಯಿಂದ ನಗರದಲ್ಲಿ ಆತಂಕ ಮೂಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಿಚಿತ ದುಷ್ಕರ್ಮಿಗಳು ಅಲ್ತಾಫ್ ಮನಗೂಳಿ ಎಂಬಾತನನ್ನು ಹತ್ಯೆಗೈದು ಪರಾರಿಯಾದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಗಾಂಧಿಚೌಕ್ ಪೊಲೀಸ್ ಠಾಣೆಯ ಸಿಪಿಐ ಹಾಗೂ ಪಿಎಸ್‌ಐ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಮೃತ ವ್ಯಕ್ತಿ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಎಂ.ಓ.ಬಿ ಆಗಿದ್ದ ಹಾಗೂ ಕಳ್ಳತನ ಸೇರಿದಂತೆ ಇತರೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ. 

ಘಟನಾ ಸ್ಥಳದಿಂದ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಗೆ ನಿಖರ ಕಾರಣವೇನು ಮತ್ತು ಕೃತ್ಯದಲ್ಲಿ ಭಾಗಿಯಾಗಿರುವವರು ಯಾರು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button