Belagavi NewsBelgaum NewsCrimeKannada NewsKarnataka NewsNational

*ಭೀಕರ ರಸ್ತೆ ಅಪಘಾತ*: *ಪೊಲೀಸ್ ಹೆಡ್‌ಕಾನ್ಸ್‌ಟೇಬಲ್‌ ಮತ್ತು ಪುತ್ರಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಹಾಗೂ ಅವರ ಪುತ್ರಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ನಿಪ್ಪಾಣಿ ಟೌನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಂಡಲಿಕ ಹಟ್ಟಿ (50) ಹಾಗೂ ಅವರ ಪುತ್ರಿ ನಿಖಿತಾ (24) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಘಟನೆ ನಡೆದಿದೆ,

ತಂದೆ-ಮಗಳು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರೂ ರಸ್ತೆಗೆ ಬಿದ್ದಿದ್ದು, ಅವರ ಮೇಲೆ ಲಾರಿ ಹರಿದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ನಿಪ್ಪಾಣಿ ಶಹರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button