
ಪ್ರಗತಿವಾಹಿನಿ ಸುದ್ದಿ: ಬಿಟೆಕ್ ವಿದ್ಯಾರ್ಥಿನಿಯೊಬ್ಬಳು ಪ್ರತಿಷ್ಠಿತ ವಿಶ್ವವಿದ್ಯಾಲಯದ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
20 ವರ್ಷದ ವರ್ಷಿತಾ ಮೃತ ವಿದ್ಯಾರ್ಥಿನಿ. ಆಂಧ್ರಪ್ರದೇಶ ಗುಂತಕಲ್ ಮೂಲದ ವಿದ್ಯಾರ್ಥಿನಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ದಬಳ್ಳಾಪುರ ತಾಲೂಕಿನ ಗೀತಂ ವಿಶ್ವವಿದ್ಯಾಲಯದಲ್ಲಿ ಮೂರನೇ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿದ್ದಳು.
ಇಂದು ಬೆಳಿಗ್ಗೆ ಗೀತಂ ವಿಶ್ವವಿದ್ಯಾಲಯದ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾಳೆ. ಕೆಲ ದಿನಗಳಿಂದ ವರ್ಷಿತಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ. ಇದೇ ಕಾರಣಕ್ಕೆ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ತನಿಖೆ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




