Kannada NewsLatestNationalPolitics

*ತಿರಂಗ ರ‍್ಯಾಲಿಗೂ ಮುನ್ನ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಿದ್ದ ‘ಲೆಹ್ರಾ ದೋ ತಿರಂಗ’ ರ‍್ಯಾಲಿ ಆರಂಭವಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಸಿಜೆಪೊ ಕಾರ್ಯಕರ್ತರು ರಾಷ್ಟ್ರ ಧ್ವಜ ಹಿಡಿದು ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ತಿರಂಗ ಯಾತ್ರೆಗೂ ಮುನ್ನಲ್ಲೇ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ದೆಹಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಎಸ್​ಐಆರ್ ಪ್ರಕ್ರಿಯೆಯ ಅಕ್ರಮಗಳನ್ನು ವಿರೋಧಿಸಿ ನಡೆಯುತ್ತಿರುವ ತಿರಂಗ ಯಾತ್ರೆ ಅಭಿಯಾನಕ್ಕೆ ತೆರಳುತ್ತಿದ್ದ ವೇಳೆ ದೆಹಲಿ ಸೆಂಟ್ರಲ್ ಪಾರ್ಕ್ ಬಳಿ ದೀಪ್ಕೆ ಅವರನ್ನು ವಶಕ್ಕೆ ಪಡೆಯಲಾಗಿದೆ.

ಈ ವೇಳೆ ಸಿಜೆಪಿ ಕಾರ್ಯಕರ್ತರು ಅಭಿಜೀತ್ ದಿಪ್ಕೆ ಅವರನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವಾಹನವನ್ನು ಅಡ್ಡಗಟ್ಟಿ ಘೋಷಣೆ ಕೂಗಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕನ್ನಾಟ್ ಪ್ಲೇಸ್‌ನಲ್ಲಿ ಸುಮಾರು 6,000ಕ್ಕೂ ಹೆಚ್ಚು ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button