CrimeKannada NewsKarnataka NewsLatest

*ಹಾವು ಕಚ್ಚಿ ಎರಡು ವರ್ಷದ ಮಗು ಸಾವು*

ಪ್ರಗತಿವಾಹಿನಿ ಸುದ್ದಿ: ಮನೆಯ ಅಂಗಳದ ಬಳಿ ಆಟವಾಡುತ್ತಿದ್ದ ಎರಡು ವರ್ಷದ ಪುಟ್ಟ ಬಾಲಕನ ಬದುಕು ಹಾವು ಕಡಿತದಿಂದ ದುರಂತ ಅಂತ್ಯ ಕಂಡಿದೆ. ಕಣ್ಣೆದುರೇ ನಡೆದ ಈ ಘಟನೆಯಿಂದ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ. ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಬಾಲಕ ಕೊನೆಯುಸಿರೆಳೆದಿದ್ದಾನೆ.

ಮೃತ ಬಾಲಕನನ್ನು ಯುನೈ (2) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಾಡಕಲಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಸಿಪೇಟೆ ಗ್ರಾಮದ ನಿವಾಸಿಗಳಾದ ಅನಿಲ್ ಮತ್ತು ರೂಪ ದಂಪತಿಯ ಪುತ್ರ ಯುನೈ ಮನೆಯ ಬಳಿ ಆಟವಾಡುತ್ತಿದ್ದಾಗ ಹಾವು ಕಚ್ಚಿದೆ.

ಹಾವು ಕಚ್ಚಿರುವುದು ಗಮನಕ್ಕೆ ಬಂದ ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮುನ್ನವೇ ಬಾಲಕ ಮೃತಪಟ್ಟಿದ್ದಾನೆ. ಪುಟ್ಟ ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ದುರ್ಘಟನೆಯಿಂದ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button