*ಬೆಳಗಾವಿಯಲ್ಲಿ ನ. 2 ಮತ್ತು 3ರಂದು ಡಿಎಸ್ಸಿ ನೇಮಕಾತಿ ರ್ಯಾಲಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಸೈನಿಕರಿಗಾಗಿ ಬೆಳಗಾವಿಯ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟಲ್ ಸೆಂಟರ್ನಲ್ಲಿ ನವೆಂಬರ್ 2 ಮತ್ತು 3ರಂದು ಡಿಫೆನ್ಸ್ ಸೆಕ್ಯುರಿಟಿ ಕಾರ್ಪ್ಸ್ (ಡಿಎಸ್ಸಿ) ನೇಮಕಾತಿ ರ್ಯಾಲಿ ಆಯೋಜಿಸಲಾಗಿದೆ.
ನಿಯಮಿತ ಸೇನೆ ಹಾಗೂ ಪ್ರಾದೇಶಿಕ ಸೇನೆಯಲ್ಲಿ (ಟಿಎ) ಸೇವೆ ಸಲ್ಲಿಸಿ ನಿವೃತ್ತರಾದ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ಗೆ ಸೇರಿದ ಮಾಜಿ ಸೈನಿಕರು ಮಾತ್ರ ಈ ರ್ಯಾಲಿಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಸೈನಿಕ ಸಾಮಾನ್ಯ ಕರ್ತವ್ಯ (Soldier General Duty) ಮತ್ತು ಸೈನಿಕ ಕ್ಲರ್ಕ್ (SD) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಅರ್ಹತಾ ಮಾನದಂಡಗಳು:
ಸೈನಿಕ ಸಾಮಾನ್ಯ ಕರ್ತವ್ಯ ಹುದ್ದೆಗೆ ನಿವೃತ್ತಿಯಾದ ಎರಡು ವರ್ಷಗಳೊಳಗೆ ಹಾಗೂ ಸೈನಿಕ ಕ್ಲರ್ಕ್ (SD) ಹುದ್ದೆಗೆ ನಿವೃತ್ತಿಯಾದ ಐದು ವರ್ಷಗಳೊಳಗೆ ಮರುನೇಮಕಾತಿಗೆ ಅರ್ಜಿ ಸಲ್ಲಿಸಬೇಕು. ಅಲ್ಲದೆ, ಸೈನಿಕ ಸಾಮಾನ್ಯ ಕರ್ತವ್ಯ ಹುದ್ದೆಗೆ 46 ವರ್ಷಕ್ಕಿಂತ ಕಡಿಮೆ ಹಾಗೂ ಸೈನಿಕ ಕ್ಲರ್ಕ್ ಹುದ್ದೆಗೆ 48 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.
ಆಸಕ್ತ ಮತ್ತು ಅರ್ಹ ಮಾಜಿ ಸೈನಿಕರು ನವೆಂಬರ್ 2ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿಯ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟಲ್ ಸೆಂಟರ್ನಲ್ಲಿ ವರದಿ ಮಾಡಿಕೊಳ್ಳಬೇಕು.
ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟಲ್ ಸೆಂಟರ್, ಬೆಳಗಾವಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ


