EducationKannada NewsKarnataka News

*ಭಾನುವಾರವಾದರೂ ಶಾಲೆಗಳಿಗೆ ಇಲ್ಲ ರಜೆ*

ಪ್ರಗತಿವಾಹಿನಿ ಸುದ್ದಿ: ಈ ಬಾರಿಯ ಕನ್ನಡ ರಾಜ್ಯೋತ್ಸವ ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಂಭ್ರಮದಿಂದ ಆಚರಿಸುವುದು ಕಡ್ಡಾಯವಾಗಿದೆ. 

2026ರ ನವೆಂಬರ್ 1ರಂದು ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಆಚರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದೆ.

ಎಲ್ಲ ಶಾಲೆಗಳಿಗೂ ಅನ್ವಯವಾಗುವ ಆದೇಶ

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಈ ಆದೇಶವನ್ನು ಪಾಲಿಸಬೇಕು. ಭಾನುವಾರ ರಜಾ ದಿನವಾಗಿದ್ದರೂ ಕನ್ನಡ ರಾಜ್ಯೋತ್ಸವ ಆಚರಣೆಗೆ ಯಾವುದೇ ವಿನಾಯಿತಿ ನೀಡಿಲ್ಲ. ನಾಡಹಬ್ಬವನ್ನು ಗೌರವಪೂರ್ವಕವಾಗಿ ಆಚರಿಸುವಂತೆ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಶಿಕ್ಷಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಳರ್ ಅವರು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ರಾಷ್ಟ್ರೀಯ ಹಬ್ಬಗಳು, ಕನ್ನಡ ರಾಜ್ಯೋತ್ಸವ ಹಾಗೂ ಇತರೆ ಪ್ರಮುಖ ಜಯಂತಿಗಳನ್ನು ನಿಗದಿತ ದಿನಗಳಂದೇ ಶಾಲೆಗಳಲ್ಲಿ ಆಚರಿಸುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಾಲೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಅಪರ ಆಯುಕ್ತರು, ಉಪನಿರ್ದೇಶಕರು (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಾಲಾ ಮುಖ್ಯಸ್ಥರಿಗೆ ತುರ್ತು ಮಾಹಿತಿ ರವಾನಿಸಿ, ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಲಾಗಿದೆ. ರಜೆ ದಿನವಾಗಿದ್ದರೂ ಕನ್ನಡದ ಹಬ್ಬಕ್ಕೆ ಆದ್ಯತೆ ನೀಡುವಂತೆ ಶಿಕ್ಷಣ ಇಲಾಖೆ ಸ್ಪಷ್ಟ ಸಂದೇಶ ನೀಡಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button