
ಪ್ರಗತಿವಾಹಿನಿ ಸುದ್ದಿ: ಹಿರಿಯ ಸಂಗೀತ ನಿರ್ದೇಶಕ, ದೇವಾ ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ನಡೆದಿದೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. 80, 90 ರ ದಶಕದಲ್ಲಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಜನಪ್ರಿಯ ಸಂಗೀತ ಸಂಯೋಜಕರಾಗಿ ಛಾಪು ಮೂಡಿಸಿದ್ದ ದೇವಾ ಇಂದು ಇಹಲೋಕ ತ್ಯಜಿಸಿದ್ದಾರೆ.
ಚೆನ್ನೈನ ನಿವಾಸದಲ್ಲಿ ಇಂದು ಬೆಳಿಗ್ಗೆ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ದೇವಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿಬಂದಿದೆ.
ದೇವಾ ಅವರು, ಕನ್ನಡ, ತಮಿಳು, ತೆಲುಗು, ಮಲಯಾಳಂ ಚಿತ್ರರಂಗದಲ್ಲಿ 400ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದರು. ಕನ್ನಡದ ಸಿಂಹಾದ್ರಿಯ ಸಿಂಹ, ಕೋಟಿಗೊಬ್ಬ, ಅಮೃತವರ್ಷಿಣಿ, ಕದಂಬ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದರು. ಹಿರಿಯ ಸಂಗೀತ ನಿರ್ದೇಶಕನ ಅಗಲಿಕೆಗೆ ಇಡೀ ದಕ್ಷಿಣ ಭಾರತ ಚಿತ್ರರಂಗ ಕಂಬನಿ ಮಿಡಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




