*ಸ್ಪಾ, ಸಲೂನ್ಗಳಲ್ಲಿ ಹಣಕ್ಕಾಗಿ ಬೆದರಿಕೆ ಆರೋಪ*: *ನಾಲ್ವರು ಮಹಿಳೆಯರು ಸೇರಿ 6 ಮಂದಿ ಅರೆಸ್ಟ್!*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಸ್ಪಾ ಮತ್ತು ಸಲೂನ್ಗಳಿಗೆ ತೆರಳಿ ನೈತಿಕ ಪೊಲೀಸ್ಗಿರಿ ನಡೆಸಿ, ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಧ್ಯಮಗಳು ಮತ್ತು ವಿವಿಧ ಸಂಘಟನೆಗಳ ಹೆಸರಿನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ, ಹಣ ನೀಡದಿದ್ದರೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ಐದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ.
ಬಂಧಿತರನ್ನು ಲಕ್ಷ್ಮಿ, ಮಮತಾ, ಪ್ರಿಯಾ, ಸಗಾಯ್ ಮೇರಿ, ಯೋಗಬಾಲು ಮತ್ತು ಆಸೀಫ್ ಎಂದು ಗುರುತಿಸಲಾಗಿದೆ. ಈ ಪೈಕಿ ನಾಲ್ವರು ಮಹಿಳೆಯರು ಸೇರಿದ್ದಾರೆ. ಬೆಂಗಳೂರಿನ ವಿವಿಧ ಸ್ಪಾ ಮತ್ತು ಸಲೂನ್ಗಳಿಗೆ ತೆರಳುತ್ತಿದ್ದ ಆರೋಪಿಗಳು, ಅಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಸಿಬ್ಬಂದಿ ಹಾಗೂ ನಿರ್ವಾಹಕರ ಮೇಲೆ ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ.
ಹಣ ನೀಡದಿದ್ದರೆ ಸ್ಪಾ ಮತ್ತು ಸಲೂನ್ಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪವೂ ಕೇಳಿಬಂದಿದೆ. ಐದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
ಕಾರ್ಯಾಚರಣೆ ನಡೆಸಿದ ಪೊಲೀಸರು ಆರು ಮಂದಿಯನ್ನು ಬಂಧಿಸಿ, ಕಾರು, ಬೈಕ್, ನಗದು ಹಣ ಹಾಗೂ ಕೆಲವು ನಕಲಿ ಗುರುತಿನ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ. ನಕಲಿ ಐಡಿ ಕಾರ್ಡ್ಗಳನ್ನು ಬಳಸಿಕೊಂಡು ಬೆದರಿಕೆ ಹಾಕಲಾಗಿತ್ತೇ ಎಂಬುದೂ ಸೇರಿದಂತೆ ಪ್ರಕರಣದ ವಿವಿಧ ಆಯಾಮಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



