Kannada NewsLatestNationalPolitics

*ನಿತೀಶ್ ಕುಮಾರ್‌ ಗಾಗಿ 9 ಜನರ ಕೊಲೆ ಮಾಡಿಸಿದ್ದೇನೆ ಎಂದ ಅನಂತ್ ಕುಮಾರ್ ಸಿಂಗ್*: *ಸಂಚಲನ ಸೃಷ್ಟಿಸಿದ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್‌ಗಾಗಿ 9 ಜನರ ಕೊಲೆ ಮಾಡಿಸಿದ್ದೇನೆ ಎಂದು ಸಂಯುಕ್ತ ಜನತಾ ದಳ (JDU) ಶಾಸಕ ಅನಂತ್ ಕುಮಾರ್ ಸಿಂಗ್ ಹೇಳಿಕೆ ನೀಡಿದ್ದು, ರಾಜಕೀಯ ರಂಗದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.

ಜೆಡಿಯು ಶಾಸಕನ ಸ್ಫೋಟಕ ಹೇಳಿಕೆ ದೊಡ್ಡ ವಿವಾದ ಸೃಷ್ಟಿ ಮಾಡಿದೆ. ಈ ವಿಚಾರವಾಗಿ ರಾಷ್ಟ್ರೀಯ ಜನತಾ ದಳ(RJD)ವು ಜೆಡಿಯು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಆದರೆ ಜೆಡಿಯು ಮಾತ್ರ ಇದರಿಂದ ಅಂತರ ಕಾಯ್ದುಕೊಂಡಿದೆ.

ಬಿಹಾರದಲ್ಲಿ ವಿಧಾನ ಪರಿಷತ್ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ, ಈ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ತಮ್ಮ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಅನಂತ್ ಕುಮಾರ್ ಸಿಂಗ್ ಅವರು ತಾವು ಹೇಳಿದ್ದು ಹಾಗಲ್ಲ ಎಂದು ಯೂ ಟರ್ನ್ ಹೊಡೆದಿದ್ದಾರೆ.

ಚುನಾವಣಾ ಆಯೋಗದ ಪ್ರಕಾರ, ಬಿಹಾರ ವಿಧಾನ ಪರಿಷತ್ತಿನ ಎಂಟು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಗಳು ಅಕ್ಟೋಬರ್ 23 ರಂದು ನಡೆಯಲಿದ್ದು, ಅಕ್ಟೋಬರ್ 27 ರಂದು ಮತ ಎಣಿಕೆ ನಡೆಯಲಿದೆ.

ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ರಾಜಕೀಯ ಪ್ರತಿಸ್ಪರ್ಧಿ ನೀರಜ್ ಕುಮಾರ್ ಅವರಿಗೆ ಪಕ್ಷವು ಟಿಕೆಟ್ ನೀಡಿರುವುದಕ್ಕೆ ಅಸಮಾಧಾನಗೊಂಡಿರುವ ಅನಂತ್ ಸಿಂಗ್, ತಮ್ಮ ಎದುರಾಳಿಯನ್ನು ತರಾಟೆಗೆ ತೆಗೆದುಕೊಳ್ಳುವ ಭರದಲ್ಲಿ ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ. “ನಿತೀಶ್ ಕುಮಾರ್ ಮತ್ತು ನನ್ನ ನಡುವೆ ದೀರ್ಘಕಾಲದ ಒಡನಾಟವಿದೆ. ಅವರಿಗೆ ಸಹಾಯ ಮಾಡಲು ನಾನು ಒಂಬತ್ತು ಜನರ ಕೊಲೆ ಮಾಡಿಸಿದ್ದೇನೆ. ಅವರು ರಾಜಕೀಯವಾಗಿ ನೆಲೆ ಕಂಡುಕೊಳ್ಳಲು ಹೆಣಗಾಡುತ್ತಿದ್ದ ಕಠಿಣ ಸಮಯದಲ್ಲಿ ನಾನು ಅವರ ಬೆಂಬಲಕ್ಕೆ ನಿಂತಿದ್ದೆ,” ಎಂದು ಹೇಳಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button