
ಪ್ರಗತಿವಾಹಿನಿ ಸುದ್ದಿ: ಬೀಚ್ ರೆಸಾರ್ಟ್ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 10 ಜನರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಾಂಗ್ಲಾ ದೇಶದ ಆಗ್ನೇಯ ಭಾಗದಲ್ಲಿರುವ ಕಡಲತೀರದ ಕಾಕ್ಸ್ ಬಜಾರ್ ಜಿಲ್ಲೆಯ ಇನಾನಿಯಲ್ಲಿರುವ ‘ತುಪ್ತುಪ್ ರೆಸ್ಟೋ & ರೆಸಾರ್ಟ್’ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹತ್ತು ಜನರು ಸಜೀವದಹನವಾಗಿದ್ದಾರೆ.
ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ಅಂತಸ್ತಿನ ಮಾದ ರೆಸಾರ್ಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಸಮಯದಲ್ಲಿ ಇಡೀ ರೆಸಾರ್ಟ್ ಗೆ ವ್ಯಾಪಿಸಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಗ್ನಿಶಾಮಕ ಸೇವೆ ಮತ್ತು ನಾಗರಿಕ ರಕ್ಷಣಾ ವಿಭಾಗದ ಉಪ ಸಹಾಯಕ ನಿರ್ದೇಶಕ ಸೈಯದ್ ಮೊಹಮ್ಮದ್ ಮೊರ್ಷೆದ್ ಹೊಸೈನ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



