Belagavi NewsBelgaum NewsCrimeKannada NewsKarnataka NewsLatest

*ಬೆಳಗಾವಿಯಲ್ಲಿ ಲಾಂಗ್ ಸದ್ದು: ಪ್ರಮುಖ ಆರೋಪಿಗಳ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಗಾಲ್ಫ್ ಸೈಡ್ ಕೆಫೆಗೆ ನುಗ್ಗಿ ಲಾಂಗ್‌ನಿಂದ ದಾಳಿ ನಡೆಸಿ, ಕೆಫೆ ಮಾಲೀಕನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅರ್ಮಾನ್ ಸೇರಿದಂತೆ ಇಬ್ಬರನ್ನು ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅರ್ಮಾನ್ ಹಾಗೂ ಸಮ್ಮೀ ಶಕೀಲ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನುಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕಳೆದ ಶುಕ್ರವಾರ ಗಾಲ್ಫ್ ಸೈಡ್ ಕೆಫೆಗೆ ನುಗ್ಗಿದ್ದ ಆರೋಪಿಗಳು, ಕೆಫೆ ಮಾಲೀಕ ಸೈಫ್ ಶೇರ್ ಖಾನ್ ಅವರ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿದ್ದರು. ಕೆಫೆ ಮಾಲೀಕರ ಸ್ನೇಹಿತರಾಗಿದ್ದ ಆರೋಪಿಗಳು, ಕೆಫೆ ಆರಂಭಿಸಿದ್ದಕ್ಕೆ ಹತಾಶೆಗೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button