Karnataka NewsLatestPolitics

*ಸ್ಟಿಂಗ್ ಆಪರೇಷನ್ ಮಾಡಿದವರನ್ನು ಒದ್ದು ಒಳಗೆ ಹಾಕಬೇಕು*: *ಸಚಿವ ಎಂ.ಬಿ.ಪಾಟೀಲ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಿರುವ ಸ್ಟಿಂಗ್ ಆಪರೇಷನ್ ವಿವಾದದ ಬಗ್ಗೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಸ್ಟಿಂಗ್ ಆಪರೇಷನ್ ನಮ್ಮ ರಾಜ್ಯಕ್ಕೆ ಒಂದು ಶಾಪ ಎಂದು ತಿಳಿಸಿದ್ದಾರೆ. ಸ್ಟಿಂಗ್ ಆಪರೇಷನ್‌ಗಳ ಮೂಲಕ ಗುರಿಯಾಗಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಸಚಿವರು ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿ ಸಲಹೆ ನೀಡಿದ್ದರು ಎಂದರು.

ಸ್ಟಿಂಗ್ ಆಪರೇಷನ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯಗಳನ್ನು ರಾಜ್ಯದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಾಜಕೀಯದಲ್ಲಿ ಪೈಪೋಟಿ ಇರುವುದು ಸಹಜ. ಆದರೆ ರಾಜಕೀಯ ಕಾರಣಗಳಿಗಾಗಿ ಇಂತಹ ಕೃತ್ಯಗಳನ್ನು ನಡೆಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಸ್ಟಿಂಗ್ ಆಪರೇಷನ್ ಯಾರೇ ಮಾಡಿದರೂ ಅದು ತಪ್ಪು. ಅಂತವರನ್ನು ಒದ್ದು ಒಳಗೆ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರಿಗೆ ಅತ್ಯಲ್ಪ ಪರಿಹಾರ ನೀಡಬಹುದು, ಹೆಚ್ಚಿನ ಪಾಲನ್ನು ಕೇಂದ್ರ ಸರ್ಕಾರವೇ ನೀಡಬೇಕು, ಕಬ್ಬು ಬೆಳೆಗಾರರ ಸಮಸ್ಯೆಗೆ ಕೇಂದ್ರ ಸರ್ಕಾರ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button