Kannada NewsLatestNational

*ಒಳ ಉಡುಪಿನಲ್ಲಿ 155ಗ್ರಾಂ ಚಿನ್ನದ ಪುಡಿ ಇಟ್ಟುಕೊಂಡು ಸಾಗಾಟ*: *ತಪಾಸಣೆ ವೇಳೆ ಎಸ್ಕೇಪ್ ಆಗುತ್ತಿದ್ದ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಒಳ ಉಡುಪಿನಲ್ಲಿ ಚಿನ್ನದ ಪುಡಿಗಳನ್ನು ಇಟ್ಟುಕೊಂಡು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬ ತಪಾಸಣೆ ವೇಳೆ ಎಸ್ಕೇಪ್ ಆಗಲು ಯತ್ನಿಸಿರುವ ಘಟನೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬೆನ್ನಟ್ಟಿ ಹಿಡಿರುವ ಘಟನೆ ನಡೆದಿದೆ. ಆರೋಪಿ ತನ್ನ ಒಳ ಉಡುಪಿನಲ್ಲಿ 155ಗ್ರಾಂ ಚಿನ್ನದ ಪುಡಿ ಇಟ್ಟುಕೊಂಡು ಸಾಗಿಸುತ್ತಿದ್ದ.

ದೆಹಲಿಯ ಜಾಮಾ ಮಸೀದಿ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರ ತಪಾಸಣೆ ವೇಳೆ ವ್ಯಕ್ತಿಯೊಬ್ಬ ಪರಾರಿಗೆ ಯತ್ನಿಸಿದ್ದಾನೆ. ಈ ವೇಳೆ ಭದ್ರತಾ ಸಿಬ್ಬಂದಿ ಆತನ ಬೆನ್ನಟ್ಟಿ ಹಿಡಿದಿದ್ದಾರೆ. ಪರಿಶೀಲಿಸಿದಾಗ ಒಳ ಉಡುಪಿನಲ್ಲಿ 155 ಗ್ರಾಂ ಚಿನ್ನದ ಪುಡಿ ಇರುವುದು ಪತ್ತೆಯಾಗಿದೆ.

ಆತನನ್ನು ಬಂಧಿಸಲಾಗಿದ್ದು, ಬಂಧಿತನನ್ನು ಮೊಹಮ್ಮದ್ ಶೋಯೆಬ್ ಎಂದು ಗುರುತಿಸಲಾಗಿದೆ. ಈತ ಉತ್ತರ ಪ್ರದೇಶದ ಮುಜಾಫರ್‌ನಗರದವನೆಂದು ತಿಳಿದುಬಂದಿದೆ. ಅಲ್ಲದೇ ಮಲೇಷ್ಯಾದ ಕೌಲಾಲಂಪುರದಲ್ಲಿಯೂ ಮನೆ ಇರುವುದಾಗಿ ಆತ ಹೇಳಿಕೊಂಡಿದ್ದಾನೆ. ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ತಪಾಸಣೆ ವೇಳೆ ಸ್ಕ್ಯಾನರ್‌ನಲ್ಲಿ ಅನುಮಾನಾಸ್ಪದ ವಸ್ತುವೊಂದು ಕಂಡುಬಂದಾಗ ಶೋಯೆಬ್ ಅಲ್ಲಿಂದ ಓಡಿಹೋಗಲು ಯತ್ನಿಸಿದ್ದ. ಆದರೆ, ನಿರ್ಗಮನ ದ್ವಾರದ ಬಳಿ ಸಿಐಎಸ್‌ಎಫ್ ಸಿಬ್ಬಂದಿ ಆತನನ್ನು ಹಿಡಿದಿದ್ದರು. ಬಳಿಕ ಪರಿಶೀಲನೆ ನಡೆಸಿದಾಗ ಚಿನ್ನದ ಪುಡಿ ಪತ್ತೆಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button