*ವಿಧಾನಸೌಧಕ್ಕೆ ಬಾಂಬ್ ಇಟ್ಟು ಸ್ಫೋಟಿಸಿದ ರೀತಿಯಲ್ಲಿ AI ವಿಡಿಯೋ ಹರಿಬಿಟ್ಟ ಕಿಡಿಗೇಡಿ*

ಪ್ರಗತಿವಾಹಿನಿ ಸುದ್ದಿ: ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಬೇಕು ಎಂಬ ಕಾರಣಕ್ಕೆ ಸರಿ ತಪ್ಪುಗಳ ಅರಿವೂ ಇಲ್ಲದೇ ಮನ ಬಂದಂತೆ ಎಐ ವಿಡಿಯೋಗಳನ್ನು ಮಾಡಿ ಅಪ್ ಲೋಡ್ ಮಾಡುತ್ತಿರುವ ಪ್ರಕರಣ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಅದೇ ರೀತಿ ಕಿಡಿಗೇಡಿಯೊಬ್ಬ ವಿಧಾನಸೌಧವನ್ನು ಬ್ಲಾಸ್ಟ್ ಮಾಡಿದ ರೀತಿಯಲ್ಲಿ ಎಐ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಘಟನೆ ನಡೆದಿದೆ.
ವಿಡಿಯೋದಲ್ಲಿ ಯುವಕನೊಬ್ಬ ವಿಧಾನಸೌಧದ ಮುಂದೆ ನಿಂತು ವಿಧಾನಸೌಧವನ್ನು ತೋರಿಸುತ್ತಾನೆ. ಕೆಲವೇ ಕ್ಷಣಗಳಲ್ಲಿ ಬಾಂಬ್ ಇಟ್ತು ಸ್ಫೋಟಿಸಿದ ರೀತಿ ವಿಧಾನಸೌಧವೇ ಸಂಪೂರ್ಣ ಬ್ಲಾಸ್ಟ್ ಆದ ರೀತಿಯಲ್ಲಿ ವಿಡಿಯೋದಲ್ಲಿ ಬಿಂಬಿಸಲಾಗಿದೆ. ವಿಧಾನಸೌಧಕ್ಕೆ ಬಾಂಬ್ ಇಟ್ಟು ಸ್ಫೋಟಿಸಿದ ರೀತಿಯಲ್ಲಿ ಎಐ ವಿಡಿಯೋ ಸೃಷ್ಟಿಸಲಾಗಿದೆ.
ಕಿಡಿಗೇಡಿಯ ಈ ಕೃತ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಗಳು ಕೇಳಿಬಂದಿವೆ. ಬೆಂಗಳೂರು ಪೊಲೀಸರು ಕಿಡಿಗೇಡಿಯ ಪತ್ತೆಗೆ ಶೋಧ ನಡೆಸಿದ್ದು, ಶೀಘ್ರದಲ್ಲೇ ವಶಕ್ಕೆ ಪಡೆಯಲು ಮುಂದಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




