
ಪ್ರಗತಿವಾಹಿನಿ ಸುದ್ದಿ: ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ.
ಅಬ್ದುಲ್ ರಹೇಮಾನ್ ಎಂಬುವರಿಗೆ ಸೇರಿದ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಬ್ಯಾಗ್‌ನಲ್ಲಿ ಇರಿಸಲಾಗಿದ್ದ ಬ್ಯಾಟರಿ ಮಾದರಿಯ ವಸ್ತುವೊಂದು ಏಕಾಏಕಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.
ಘಟನೆಯಲ್ಲಿ ಕಟ್ಟಡದಲ್ಲಿದ್ದ ಸೂರಜ್ ಹಾಗೂ ಅಲ್ಲಾವುದ್ದೀನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಘಟನೆ ನಡೆದ ತಕ್ಷಣ ಪುಲಿಕೇಶಿನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟದ ತೀವ್ರತೆ ಹಾಗೂ ಶಂಕಿತ ವಸ್ತು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಭಯೋತ್ಪಾದನಾ ನಿಗ್ರಹ ದಳ (ಎಟಿಸಿ) ಹಾಗೂ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



