Film & EntertainmentLatestNational

*ಗೋಲ್ಡನ್ ಟೆಂಪಲ್ ನಲ್ಲಿ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ನಟಿ ಸಾರಾ ಅಲಿ ಖಾನ್*: *ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ಅಮೃತಸರದ ಗೋಲ್ಡನ್‌ ಟೆಂಪಲ್‌ಗೆ ಭೇಟಿ ನೀಡಿದ್ದ ಬಾಲಿವುಡ್ ನಟಿ ಸಾರಾ ಅಲಿ ಖಾನ್‌ ಭಾವುಕರಾಗಿಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿರುವ ಘಟನೆ ನಡೆದಿದೆ.

ನಟಿ ಸಾರಾ ಅಲಿ ಖಾನ್ ಮತ್ತು ಆಯುಷ್ಮಾನ್ ಖುರಾನಾ ತಮ್ಮ ಮುಂಬರುವ ಚಲನಚಿತ್ರ ‘ಉಡ್ತಾ ತೀರ್’ ಬಿಡುಗಡೆಗೆ ಮುನ್ನ, ದಸರಾ ಹಬ್ಬದ ಹಿನ್ನೆಲೆಯಲ್ಲಿ ಆಶೀರ್ವಾದ ಪಡೆಯಲು ಇತ್ತೀಚೆಗೆ ಅಮೃತಸರದ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ವೈರಲ್ ಆಗಿರುವ ವಿಡಿಯೋವೊಂದರಲ್ಲಿ, ಸಾರಾ ಅವರು ಬಿಕ್ಕಿ ಬಿಕ್ಕಿ ಅಳುತ್ತಿರುವುದು ಕಂಡುಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸಾರಾ ಮತ್ತು ಆಯುಷ್ಮಾನ್ ಖುರಾನಾ ದರ್ಬಾರ್ ಸಾಹಿಬ್‌ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ದೃಶ್ಯವಿರುವ ವಿಡಿಯೋ ವೈರಲ್ ಆಗಿವೆ. ಈ ವೇಳೆ ಸಾರಾ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ಯಾವ ಕಾರಣಕ್ಕಾಗಿ ಸಾರಾ ಅಲಿ ಖಾನ್ ಪ್ರಾರ್ಥನೆ ವೇಳೆ ಭಾವುಕರಾದರು ಎಂಬುದು ತಿಳಿದುಬಂದಿಲ್ಲ. ಆದರೆ ಸಾಮಾಜಿಕ ಜಾಲತಾಣಗಳ್ಅಲ್ಲಿ ಈ ದೃಶ್ಯ ಭಾರಿ ವೈರಲ್ ಆಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button