
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಗಾಳಿಪಟ ಹಾರಿಸುವ ಮಾಂಜಾ ದಾರಕ್ಕೆ ಸಿಲುಕಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಮಾಂಜಾ ದಾರ ಕತ್ತಿಗೆ ಸುತ್ತಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದೆ. 38 ವರ್ಷದ ವಿದ್ಯಾ ಮೃತ ಮಹಿಳೆ. ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ಮನೆಯತ್ತ ತೆರಳುತ್ತಿದ್ದ ವೇಳೆ ಮಾಂಜಾ ದಾರ ಆಕಸ್ಮಿಕವಾಗಿ ಕತ್ತಿಗೆ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಮಹಿಳೆ ಹುಬ್ಬಳ್ಳಿಯ ಭರತ್ ನಗರದ ನಿವಾಸಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




