CrimeKarnataka NewsLatest

*ಬೀದಿನಾಯಿಯನ್ನು ಮರಕ್ಕೆ ನೇತುಹಾಕಿ ಹೊಡೆದು ಕೊಂದ ದುಷ್ಕರ್ಮಿಗಳು*: *ವಿಡಿಯೋ ವೈರಲ್*

ಪ್ರಗತಿವಾಹಿನಿ ಸುದ್ದಿ: ಇದೆಂತಹ ವಿಲಕ್ಷಣ ಕೃತ್ಯ. ಬೀದಿ ನಾಯಿಯನ್ನು ಮರಕ್ಕೆ ನೇತುಹಾಕಿ ಕ್ರೂರವಾಗಿ ಹಲ್ಲೆ ಮಾಡಿ ಕೊಂದಿರುವ ಘಟನೆ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಶ್ವಾನ ಪ್ರಿಯೆ ನಿಶ್ಚಿಂತ ನರೇನ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪುನೀತ್, ಮುರಳಿ ಹಾಗೂ ಮುನಿಯಪ್ಪ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ಗುಂಜೂರಿನ ಗ್ರೀನ್ ವುಡ್ ಹೈಸ್ಕೂಲ್ ಬಳಿ ಇರುತ್ತಿದ್ದ ಬೀದಿನಾಯಿಯನ್ನು ಏರಿಯಾ ಸುತ್ತಮುತ್ತಲಿನ ಮುನಿಯಪ್ಪ, ಮುರಳಿ ಹಾಗೂ ಪುನೀತ್ ಎಂಬುವರು ಮರಕೆ ಕಟ್ಟಿಹಾಕಿ ಕ್ರೂರವಾಗಿ ಹೊಡೆದು ಹೊಡೆದು ಸಾಯಿಸಿದ್ದಾರೆ. ಈ ಘಟನೆ ಶಾಲೆಯ ಎದುರು ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವರ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸಿಸಿಟಿವಿ ಆಧರಿಸಿ ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೀದಿನಾಯಿಯ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಚಾರಣೆ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ಧಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button