* ಸಿದ್ದರಾಮಯ್ಯ ಸ್ಟಿಂಗ್ ವಿಡಿಯೋ ಅಸಲಿ ಸತ್ಯ ಬಿಚ್ಚಿಟ್ಟ ಯತೀಂದ್ರ*: *ವಿಡಿಯೋದಲ್ಲಿರುವ ಮಹಿಳೆಯ ಉದ್ದೇಶವೇನು?*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದಾರೆ.
ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಿಎಂ ಸಿದ್ದರಾಮಯ್ಯ ಸ್ಟಿಂಗ್ ವಿಡಿಯೋದ ಅಸಲಿ ಸತ್ಯ ಬಿಚ್ಚಿಟ್ಟಿದ್ದಾರೆ. ಈ ಪ್ರಕರಣವು ಸಿದ್ದರಾಮಯ್ಯ ಅವರ ತೇಜೋವಧೆ ಮಾಡಲು ಮತ್ತು ಬ್ಲಾಕ್‌ಮೇಲ್ ಮಾಡುವ ಉದ್ದೇಶದಿಂದ ನಡೆಸಿದ ಸಂಚು. ಇದರಲ್ಲಿ ಕಾಂಗ್ರೆಸ್ ಪಕ್ಷದವರೂ ಶಾಮೀಲಾಗಿದ್ದಾರೆ ಎಂದು ತಿಳಿಸಿದ್ದಾರೆ.
ಪೊಲೀಸರು ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ. ಒಂದು ವೇಳೆ ತನಿಖೆ ನಿರೀಕ್ಷಿತ ಮಟ್ಟದಲ್ಲಿ ನಡೆಯದಿದ್ದರೆ, ಮುಂದಿನ ಕ್ರಮಗಳ ಬಗ್ಗೆ ಯೋಚಿಸುವುದಾಗಿ ಅವರು ಹೇಳಿದರು.
ಈ ಸ್ಟಿಂಗ್ ವಿಡಿಯೋದಲ್ಲಿ ತಮ್ಮ ಪಕ್ಷದವರೇ ಭಾಗಿಯಾಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಅಲ್ಲದೆ, ಒಬ್ಬ ಮಾಧ್ಯಮ ಮುಖ್ಯಸ್ಥರೂ ಸಹ ಇದರಲ್ಲಿ ಕಾಣಿಸಿಕೊಂಡಿದ್ದಾರೆ ಎಂಬುದನ್ನು ವಿಡಿಯೋ ಸ್ಪಷ್ಟಪಡಿಸುತ್ತದೆ. ಆದರೆ, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಪಕ್ಷವನ್ನು ದೂಷಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಸ್ಟಿಂಗ್ ಆಪರೇಷನ್‌ನ ಹಿಂದಿನ ಉದ್ದೇಶ ಟಿಕೆಟ್ ಪಡೆಯುವುದು. ಸಿದ್ದರಾಮಯ್ಯ ಹೆಸರಿಗೆ ಕಪ್ಪುಚುಕ್ಕೆ ಇಡುವುದಾಗಿದೆ. ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆಯೊಬ್ಬರು ಪುತ್ತೂರು ಟಿಕೆಟ್‌ಗಾಗಿ ಆಕಾಂಕ್ಷಿಯಾಗಿದ್ದರು ಎಂಬ ಮಾಹಿತಿ ಇದೆ. ಹಾಗಾಗಿ, ರಾಜಕೀಯ ಲಾಭಕ್ಕಾಗಿ ಮತ್ತು ಸಿದ್ದರಾಮಯ್ಯ ಹೆಸರನ್ನು ಕೆಡಿಸಲು ಈ ರೀತಿಯ ಕೃತ್ಯಕ್ಕೆ ಮುಂದಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




