Kannada NewsKarnataka NewsLatest

*ತಿಮ್ಮೋಜನಹಳ್ಳಿ ಗ್ರಾಮದಲ್ಲಿ ಭೂಕಂಪ: ಮುನ್ನೆಚ್ಚರಿಕೆಗೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಈವರೆಗೆ ವಿಜಯಪುರ ಜಿಲ್ಲೆಯಲ್ಲಿ ಆಗಾಗ ಭೂಕಂಪ ಸಂಭವಿಸುತ್ತಿತ್ತು. ಇದೀಗ ತಿಮ್ಮೋಜನಹಳ್ಳಿ ಗ್ರಾಮದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮೋಜನಹಳ್ಳಿ ಗ್ರಾಮದಲ್ಲಿ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ.

ಬೆಳಗ್ಗೆ 9 ಗಂಟೆಗೆ ಭೂಕಂಪ ಸಂಭವಿಸಿದ್ದು, ಗ್ರಾಮದ ಸುತ್ತಮುತ್ತ ಭೂಮಿ ಅಲುಗಾಡಿದ ಅನುಭವವಾಅಗಿದೆ. ಘಟನೆಯಲ್ಲಿ ಯಾವುದೇ ಹಾನಿಯಾಗಿಲ್ಲ. ಮುನ್ನಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ಸೂಚನೆ ನೀಡಿದೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ತೂಬಗೆರೆ ಸುತ್ತಮುತ್ತ ಭೂಮಿ ಕಂಪನವಾಗಿದೆ. ಇಂದು ಬೆಳಗ್ಗೆ 9 ಗಂಟೆ 1 ನಿಮಿಷ 59 ಸೆಕೆಂಡ್​​ಗೆ ಭೂಕಂಪನ ದಾಖಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ (KSNDMC) ಅಧಿಕೃತ ಮಾಹಿತಿ ಸಿಕ್ಕಿದೆ.

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮೋಜನಹಳ್ಳಿ ಬಳಿ ಭೂಕಂಪನದ ಕೇಂದ್ರ ಬಿಂದುವಾಗಿದ್ದು, ತಿಮ್ಮೋಜನಹಳ್ಳಿ ಗ್ರಾಮದಿಂದ 500 ಮೀಟರ್ ಉತ್ತರಕ್ಕೆ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ. ಭೂಮಿಯ 10 ಕಿಲೋಮೀಟರ್ ಆಳದಲ್ಲಿ ಭೂಕಂಪನ ಸಂಭವಿಸಿದೆ. ನರಗಾನಹಳ್ಳಿ, ತೂಬಗೆರೆ ಹಾಗೂ ಕರ್ನಾಲ ಗ್ರಾಮಗಳ ಸಮೀಪ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button