
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಿಕ್ಷಕರಾಗಬೇಕೆಂಬ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾಅರ ಗುಡ್ ನ್ಯೂಸ್ ನೀಡಿದೆ. 2026-27ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 15,000 ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸಲಾಗಿದೆ.
ಈ ಹಿಂದೆ ಅಕ್ಟೋಬರ್ 26 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಇದೀಗ ದಿನಾಂಕ ವಿಸ್ತರಿಸಲಾಗಿದ್ದು. ಈ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇದರಿಂದಾಗಿ ಅಭ್ಯರ್ಥಿಗಳಿಗೆ ಹೆಚ್ಚುವರಿ ಸಮಯಾವಕಾಶ ಸಿಕ್ಕಂತಾಗಿದೆ.
ಈ ಹಿಂದೆ ಅಕ್ಟೋಬರ್ 26 ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಇದೀಗ ಅಭ್ಯರ್ಥಿಗಳು ನವೆಂಬರ್ 16ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿವಿಧ ಕಾರಣಗಳಿಂದಾಗಿ ಇನ್ನೂ ಅರ್ಜಿ ಸಲ್ಲಿಸದಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲು ಕರ್ನಾಟಕ ಸರ್ಕಾರ ಅಕ್ಟೋಬರ್ 23ರಂದು ಆದೇಶ ಹೊರಡಿಸಿದೆ. ಸರ್ಕಾರದ ಉಪ ಕಾರ್ಯದರ್ಶಿ (ಆಡಳಿತ) ಬಿ.ಎನ್. ಆನಂದ್ ಅವರು ಈ ಆದೇಶಕ್ಕೆ ಸಹಿ ಮಾಡಿದ್ದಾರೆ.
ಅಭ್ಯರ್ಥಿಗಳು ಗಮನಿಸಬೇಕಾದ ಅಂಶಗಳು
· ನೇಮಕಾತಿ: 15,000 ಸರ್ಕಾರಿ ಶಿಕ್ಷಕರ ಹುದ್ದೆಗಳು
· ಹುದ್ದೆಗಳ ವಿಭಾಗ: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು
· ಹಿಂದಿನ ಕೊನೆಯ ದಿನಾಂಕ: ಅಕ್ಟೋಬರ್ 26, 2026
· ಹೊಸ ಕೊನೆಯ ದಿನಾಂಕ: ನವೆಂಬರ್ 16, 2026
· ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಕೊನೆಯ ದಿನದವರೆಗೆ ಕಾಯದೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಉತ್ತಮ. ಅರ್ಜಿ ಸಲ್ಲಿಸುವ ಮೊದಲು ತಮ್ಮ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ನೇಮಕಾತಿಗೆ ಸಂಬಂಧಿಸಿದ ನಿಯಮಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬೇಕು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



