Kannada NewsKarnataka NewsLatest

*ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಿಎಂ ಡಿ.ಕೆ.ಶಿವಕುಮಾರ್ ಅನುಮತಿ*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಹಾಗೂ ಉತ್ತರವನ್ನು ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನುಮತಿ ನೀಡಿದ್ದಾರೆ.

ಈ ಮೂಲಕ ರಾಜ್ಯ ಸರ್ಕಾರ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಹೆಜ್ಜೆಯಿಟ್ಟಿದೆ. ಈ ಪ್ರಕರಣ ಕಿಂಗ್ ಪಿನ್‌ ಬಸವರಾಜ್ ಕನ್ನಾಳೆಗೆ ಜ್ಞಾನೇಂದ್ರ ಕುಮಾರ್ ಅವರು ಪ್ರಶ್ನೆ ಪತ್ರಿಕೆ ನೀಡಿದ್ದರು.


ಸಿಎಂ ಆದೇಶದಲ್ಲಿ ಏನಿದೆ?
ಕಡತ ಮತ್ತು ಅದರಲ್ಲಿನ ದಾಖಲೆಗಳನ್ನು ಪರಿಶೀಲಿಸಿದೆ. ಜ್ಞಾನೇಂದ್ರ ಕುಮಾರ್ ಗಂಗ್ವಾರ್ (ಐಎಎಸ್) ಇವರ ವಿರುದ್ಧ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ಕಲಂ 218ರ ಅನ್ವಯ ಅಭಿಯೋಜನಾ ಮಂಜೂರಾತಿ ನೀಡಿ ಆದೇಶಿಸಿದೆ.

ಕರ್ನಾಟಕ ಲೋಕಸೇವಾ ಆಯೋಗದ ಪಶು ವೈದ್ಯಾಧಿಕಾರಿ ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆ ನೇಮಕಾತಿಯಲ್ಲಿ ಹಗರಣ ನಡೆದಿರುವ ಆರೋಪ ಇತ್ತು. ಈ ಆರೋಪದಡಿಯಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರು ತಮ್ಮ ಹುದ್ದೆಯಿಂದ ಅಮಾನತುಗೊಂಡಿದ್ದರು. ಜ್ಞಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಇಡಿ ತನಿಖೆಗೆ ಒಳಪಡಿಸಿತ್ತು. ಅವರ 14 ದಿನಗಳ ಕಸ್ಟಡಿ ಅವಧಿ ಮುಕ್ತಾಯಗೊಂಡ ಬಳಿಕ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಗಂಗ್ವಾರ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button