CrimeKannada NewsLatestNational

*ಶಾಲೆಯಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯಲ್ಲಿಯೇ ವಿದ್ಯಾರ್ಥಿಯೊಬ್ಬಳು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ.

12ನೇ ತರಗತಿಯ ವಿದ್ಯಾರ್ಥಿನಿ ತಾನು ಶಾಲೆಗೆ ಬರುವಾಗಲೇ ಪೆಟ್ರೋಲ್ ಬಾಟಲ್ ಹಿಡಿದು ಬಂದಿದ್ದಳು. ಶಾಲೆಗೆ ಬಂದವಳೇ ಶಾಲೆಯ ಹಿಂಬಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ದೆಹಲಿಯ ಕೃಷ್ಣ ನಗರದಲ್ಲಿರುವ ಶಾಲೆಯೊಂದರ ಗಾರ್ಡ್ ರೂಮ್ (ಕಾವಲು ಕೊಠಡಿ) ಹಿಂಭಾಗದಲ್ಲಿ ಈ ಘಟನೆ ನಡೆದಿದೆ. 17 ವರ್ಷದ 12ನೇ ತರಗತಿ ವಿದ್ಯಾರ್ಥಿನಿಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಪೊಲೀಸರ ಪ್ರಕಾರ, ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಆರಂಭದಲ್ಲಿ ಪಿಸಿಆರ್ (PCR) ಕರೆ ಬಂದಿತ್ತು. ಕೃಷ್ಣ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದಾಗ, ಶಾಲೆಯ ಗಾರ್ಡ್ ರೂಮ್ ಹಿಂಭಾಗದಲ್ಲಿ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.

ಪೊಲೀಸ್ ಉಪ ಆಯುಕ್ತರು (DCP) ನೀಡಿರುವ ಹೇಳಿಕೆಯ ಪ್ರಕಾರ, ಪ್ರಾಥಮಿಕ ತನಿಖೆಯ ವೇಳೆ ಘಟನಾ ಸ್ಥಳದಿಂದ ಹಾಗೂ ವಿದ್ಯಾರ್ಥಿನಿಯ ಶಾಲಾ ಬ್ಯಾಗ್‌ನಿಂದ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿದ್ಯಾರ್ಥಿನಿಯ ಬಳಿ ಮೂರು ಪುಟಗಳ ಡೆತ್ ನೋಟ್ ಪತ್ತೆಯಾಗಿದೆ. ಡೆತ್ ನೋಟ್ ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವುದ್ಯಾರ್ಥಿನಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button