Kannada NewsKarnataka NewsLatest

*ಸ್ಟಿಂಗ್ ಪ್ರಕರಣ*: *ನೋಟಿಸ್ ಗೂ ಮುನ್ನವೇ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಓರ್ವ ಆರೋಪಿ ಬಂಧನದ ಬೆನ್ನಲ್ಲೇ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ.

ಸ್ಟಿಂಗ್ ಆಪರೇಷನ್ ಕುರಿತು ಬೆಂಗಳೂರು ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಸಿಸಿಬಿ ಪೊಲೀಸರು ನೋಟಿಸ್ ನೀಡುವ ಮುನ್ನವೇ ಸ್ಟಿಂಗ್ ಆಪರೇಷನ್ ಹಿಂದಿರುವ ಮಹಿಳೆ ಎನ್ನಲಾದ ಕೃಪಾ ಆಳ್ವಾ ವಿಚಾರಣೆಗೆ ಹಾಜರಾಗಿದ್ದಾರೆ.

ಸಿಸಿಬಿ ಪೊಲೀಸರು ಕೃಪಾ ಆಳ್ವಾ ವಿಚಾರಣೆ ನಡೆಸಿದ್ದಾರೆ. ನೋಟಿಸ್​ಗೂ ಮೊದಲೇ ವಿಚಾರಣೆಗೆ ಬಂದಿರುವ ಕೃಪಾ ಆಳ್ವಾ, ತಮಗೆ ಗೊತ್ತಿರುವ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಬೇರೆಯವರ ಪಾತ್ರ ಏನು? ಯಾವ ಉದ್ದೇಶಕ್ಕಾಗಿ ಈ ರೀತಿ ಮಾಡಲಾಗಿತ್ತು ಎಂಬ ಬಗ್ಗೆ ಸೈಬರ್ ಕ್ರೈಂ ಬ್ರ್ಯಾಂಚ್​​ ಪೊಲೀಸರು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಚಂದನ್, ಮೋಹನ್ ಗೌಡಗಾಗಿ ಪೊಲೀಸರು ಶೋಧ ಮುಂದುವರಿಸಿದ್ದು, ಪ್ರಕರಣದಲ್ಲಿ ಎಸ್. ಶಿವಸ್ವಾಮಿ ಎಂಬ ವ್ಯಕ್ತಿಯ ಪಾತ್ರ ಕೂಡ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button