*ಐವರು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ*: *ಬೆಳಗಾವಿಗೆ ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ನಿರ್ದೇಶನಾಲಯದ ವಿಶೇಷ ಅಧಿಕಾರಿ ನೇಮಕ*

ಪ್ರಗತಿವಾಹಿನಿ ಸುದ್ದಿ: ಐವರು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಹೆಚ್ಚುವರಿ ಹೊಣೆಗಾರಿಕೆ ವಹಿಸಿದೆ.
ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಹಲವು ಹೊಸ ವರ್ಗಾವಣೆ ಜತೆಗೆ ಹಿಂದಿನ ಕೆಲವು ಆದೇಶಗಳನ್ನು ಮಾರ್ಪಡಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮೂಲಕ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಡಾ. ರವಿಶಂಕರ್ ಜೆ – ಅವರನ್ನು ಅಬಕಾರಿ ಆಯುಕ್ತರು, ಬೆಂಗಳೂರು ವಿಭಾಗಕ್ಕೆ ನೇಮಕ ಮಾಡಲಾಗಿದೆ. ವೆಂಕಟೇಶ್ ಕುಮಾರ್ ಆರ್. ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ನಿಯೋಜಿಸಲಾಗಿದೆ.
ಇಬ್ರಾಹಿಂ ಮೈಗೂರ್ – ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಹುಬ್ಬಳ್ಳಿ ಜೊತೆಗೆ ಬೆಳಗಾವಿಯ ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ನಿರ್ದೇಶನಾಲಯದ ‘ವಿಶೇಷ ಅಧಿಕಾರಿ’ಯಾಗಿ ಹೆಚ್ಚುವರಿ ಪ್ರಭಾರ ನೀಡಲಾಗಿದೆ.
ಲತಾ ಆರ್ – ಡಿಪಿಎಆರ್ ಗೆ ವರದಿ ಮಾಡಿಕೊಳ್ಳಲು ಸೂಚನೆ ಕರ್ನಾಟಕ ಗೃಹ ಮಂಡಳಿಗೆ ಮಾಡಲಾಗಿದ್ದ ವರ್ಗಾವಣೆ ಆದೇಶವನ್ನು ಹಿಂಪಡೆಯಲಾಗಿದೆ.
ಗುರುದತ್ತ ಹೆಗಡೆ – ಒಂಬುಡ್ಸ್ಮನ್ ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸೊಸೈಟಿ, ಬೆಂಗಳೂರು. ಪ್ರಸ್ತುತ ಹುದ್ದೆಯೊಂದಿಗೆ ಈ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ಗೋವಿಂದ ರೆಡ್ಡಿ – ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶಕರು, ಬೆಳಗಾವಿ ಈ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯಲ್ಲಿ ಮುಂದಿನ ಆದೇಶದವರೆಗೆ ಮುಂದುವರಿಯಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ


