
ಪ್ರಗತಿವಾಹಿನಿ ಸುದ್ದಿ: ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ವಿಠಲ್ ಜೋನಿ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕಳೆದ ರಾತ್ರಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಹಿಂದೆ ವಿಠಲ್ ಅರಣ್ಯ ಇಲಾಖೆಯ ನೌಕರ ಸಂಘದ ಅಧ್ಯಕ್ಷರಾಗಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಧಾರವಾಡದ ಕುಮಾರೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಶವವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




