CrimeKannada NewsKarnataka NewsLatest

*ಕಾರು-ಲಾರಿ ಮುಖಾಮುಖಿ ಡಿಕ್ಕಿ*: *10 ವರ್ಷದ ಬಾಲಕ ಸಾವು, ನಾಲ್ವರಿಗೆ ಗಾಯ!*

ಪ್ರಗತಿವಾಹಿನಿ ಸುದ್ದಿ: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 10 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ.

ಭಾನುವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಮೈಸೂರಿನಲ್ಲಿ ಉದ್ಯೋಗದಲ್ಲಿರುವ ವಿಟ್ಲ ಸಮೀಪದ ಪುಣಚ ಮೂಲದ ನಾರಾಯಣ ಎಂಬವರು ಕುಟುಂಬ ಸಮೇತರಾಗಿ ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದರು. ಈ ವೇಳೆ ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಹತ್ತು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ 10 ವರ್ಷದ ಬಾಲಕ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ. ಇತರ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೊದಲು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button