CrimeKannada NewsKarnataka NewsLatest

*ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ಪ್ರಕರಣ*: *ಮೂವರು ಅರೆಸ್ಟ್*: *ಆತಂಕಕಾರಿ ಮಾಹಿತಿ ಬಯಲು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಪುಲಿಕೇಶಿನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜಲಾಲುದ್ದೀನ್ @ ಜಾಹಿದ್ ವುಲ್ ಹುಸೇನ್, ಸೈದುಲಾ ಇಸ್ಲಾಂ ಹಾಗೂ ಅಹ್ಮದ್ ಎಂದು ಗುರುತಿಸಲಾಗಿದೆ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಸ್ಸಾಂ ಮೂಲದ ಜಲಾಲುದ್ದೀನ್ ಎಂಬಾತ ಸ್ಫೋಟದ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ.

ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ಬಾಂಬ್ ತಯಾರಿಸಿದ್ದರು. ಬುರ್ಹಾನ್ ಬಾಂಬ್ ತಯಾರು ಮಾಡಿದ್ದ. ವೈಯಕ್ತಿಕ ಕಾರಣಕ್ಕಾಗಿ ಸ್ಪೋಟ ಮಾಡಿರುವುದು ಪತ್ತೆಯಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಸೈದುಲಾ ಜಲಾಲುದ್ದೀನ್ ಮೂಲಕ ಬಾಂಬ್ ಕೊಡಿಸಿದ್ದ. ಮಸ್ಕಿಯಿಂದ ಬೆಂಗಳೂರಿಗೆ ಬಸ್ ನಲ್ಲಿ ಬಾಂಬ್ ತರಲಾಗಿತ್ತು. ಜಲಾಲುದ್ದೀನ್ ಎಲೆಕ್ಟ್ರಿಕಲ್ ಮತ್ತು ವೆಲ್ಡಿಂಗ್ ಕೆಲಸ ಮಾಡುತ್ತಿದ್ದ. ಆತನಿಗೆ ಸರ್ಕ್ಯೂಟ್ ಮತ್ತು ಬಾಂಬ್ ತಯಾರಿಸುವ ಮಾಹಿತಿಯಿತ್ತು. ಬಾಂಬ್ ನಲ್ಲಿ ಸ್ಪೋಟಕ ವಸ್ತು ಇಡಲಾಗಿತ್ತು ಎಂದು ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

ದಸರಾ ಹಿಂದಿನ ದಿನರಾತ್ರಿ ಈ ಘಟನೆ ನಡೆದಿತ್ತು. ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗಿತ್ತು. ಪ್ರಕರಣದ ತನಿಖೆಗೆ 10ಕ್ಕೂ ಹೆಚ್ಚು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ರಾಯಚೂರು, ಅಸ್ಸಾಂ ಪೊಲೀಸರು ತನಿಖೆ ಮಾಡಿದ್ದಾರೆ. ಪ್ರಕರಣ ಸಂಬಂಧ 1500 ಸಿಸಿಟಿವಿಗಳ ಪರಿಶೀಲನೆ ಮಾಡಲಾಗಿದೆ. ನೂರಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button