
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕೋಟ ಮಣೂರು ನಿವಾಸಿ, ಆರ್‌ಎಸ್‌ಎಸ್ ಮುಖಂಡ ಗುರುದಾಸ್ ಶೆಣೈ ಎಂದು ಗುರುತಿಸಲಾಗಿದೆ.
ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ವೇಗವಾಗಿ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸೈಕಲ್ ಸವಾರ ರಸ್ತೆಗೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಕಾರು ಚಾಲಕ, ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಕೋಟದ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಕೋಟ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




