Film & EntertainmentKannada NewsKarnataka NewsLatest

*ಧನ್ವೀರ್ ವಿರುದ್ಧ ಝೈದ್ ಖಾನ್ ಸಮರ*: *KFCC ಮೆಟ್ಟಿಲೇರಲು ಸಜ್ಜಾದ ಜಮೀರ್ ಪುತ್ರ*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್‌ವುಡ್ ನಟ ಧನ್ವೀರ್ ಗೌಡ ಮತ್ತು ನಟ ಝೈದ್ ಖಾನ್ ನಡುವಿನ ವಿವಾದ ಈಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋದಲ್ಲಿ ಝೈದ್ ಖಾನ್ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎನ್ನಲಾದ ಆರೋಪದ ಹಿನ್ನೆಲೆಯಲ್ಲಿ, ಧನ್ವೀರ್ ವಿರುದ್ಧ ಅಧಿಕೃತ ದೂರು ನೀಡಲು ಝೈದ್ ಖಾನ್ ಮುಂದಾಗಿದ್ದಾರೆ.

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್, ಸೋಮವಾರ ಮಧ್ಯಾಹ್ನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ತೆರಳಿ ದೂರು ಸಲ್ಲಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ವೈರಲ್ ಆಗಿರುವ ಆಡಿಯೋದಲ್ಲಿ ಧನ್ವೀರ್, ಝೈದ್ ಖಾನ್ ಬಗ್ಗೆ ಕೆಳಮಟ್ಟದ ಭಾಷೆ ಬಳಸಿ ಮಾತನಾಡಿದ್ದಾರೆ ಎನ್ನಲಾಗಿದ್ದು, ಈ ಬೆಳವಣಿಗೆ ವಿವಾದಕ್ಕೆ ಕಾರಣವಾಗಿದೆ.

ಆಡಿಯೋದಲ್ಲಿ “ಝೈದ್ ಖಾನ್ ನನ್ನ ಕಾಲಿನ ಧೂಳಿಗೂ ಸಮನಲ್ಲ” ಎಂಬ ಹೇಳಿಕೆ ಕೇಳಿಬಂದಿದೆ ಎನ್ನಲಾಗಿದೆ. ಈ ಮಾತುಗಳಿಂದ ಅಸಮಾಧಾನಗೊಂಡಿರುವ ಝೈದ್ ಖಾನ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲು ಮುಂದಾಗಿದ್ದಾರೆ.

ಕನ್ನಡ ಚಿತ್ರರಂಗದ ಇಬ್ಬರು ಯುವ ನಟರ ನಡುವಿನ ಈ ವಿವಾದ ಇದೀಗ ಗಾಂಧಿನಗರದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಝೈದ್ ಖಾನ್ ದೂರು ಸಲ್ಲಿಸಿದ ಬಳಿಕ ಚಲನಚಿತ್ರ ವಾಣಿಜ್ಯ ಮಂಡಳಿ ಯಾವ ಕ್ರಮ ಕೈಗೊಳ್ಳಲಿದೆ ಎಂಬ ಕುತೂಹಲ ಮೂಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button