Film & EntertainmentKannada NewsKarnataka NewsLatest

*ಜಮೀರ್ ಪುತ್ರನ ಜೊತೆ ಜೈಲಿಗೆ ಆಗಮಿಸಿದ ವಿಜಯಲಕ್ಷ್ಮಿ*: *ಧನ್ವೀರ್ ವಿವಾದದ ನಡುವೆ ಮಹತ್ವದ ಚರ್ಚೆ?*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಜೈಲಿನಲ್ಲಿರುವಾಗಲೇ ಹೊರಗೆ ಪತ್ನಿ ವಿಜಯಲಕ್ಷ್ಮಿ ಮತ್ತು ಆಪ್ತ ಧನ್ವೀರ್ ನಡುವಿನ ವಿವಾದ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಗಳ ನಡುವೆಯೇ ವಿಜಯಲಕ್ಷ್ಮಿ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದು, ಜೊತೆಗೆ ನಟ ಝೈದ್ ಖಾನ್ ಕೂಡ ಆಗಮಿಸಿದ್ದಾರೆ. ಈ ಭೇಟಿ ಈಗ ಕುತೂಹಲ ಮೂಡಿಸಿದ್ದು, ದರ್ಶನ್ ಜೊತೆ ಯಾವ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂಬ ಪ್ರಶ್ನೆ ಎದುರಾಗಿದೆ.

ದರ್ಶನ್ ಅವರನ್ನು ಭೇಟಿಯಾಗಲು ಪತ್ನಿ ವಿಜಯಲಕ್ಷ್ಮಿ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ನಟ ಝೈದ್ ಖಾನ್ ಕೂಡ ಜೊತೆಯಲ್ಲಿದ್ದರು. ಇತ್ತೀಚಿನ ದಿನಗಳಲ್ಲಿ ದರ್ಶನ್ ಕುಟುಂಬ ಮತ್ತು ಆಪ್ತರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಭೇಟಿ ಗಮನ ಸೆಳೆದಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ವಿಜಯಲಕ್ಷ್ಮಿ ಮತ್ತು ಝೈದ್ ಖಾನ್ ದರ್ಶನ್ ಭೇಟಿಗೆ ತೆರಳಿದ್ದಾರೆ ಎನ್ನಲಾಗಿದೆ. ಆದರೆ, ಈ ಭೇಟಿಯ ಸಂದರ್ಭದಲ್ಲಿ ಯಾವ ವಿಚಾರಗಳ ಕುರಿತು ಮಾತುಕತೆ ನಡೆಯಲಿದೆ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.

ದರ್ಶನ್ ಜೈಲಿನಲ್ಲಿರುವಾಗಲೇ ಧನ್ವೀರ್ ಮತ್ತು ವಿಜಯಲಕ್ಷ್ಮಿ ನಡುವಿನ ಮನಸ್ತಾಪ ಮುನ್ನೆಲೆಗೆ ಬಂದಿದೆ. ಇಬ್ಬರ ನಡುವಿನ ಭಿನ್ನಾಭಿಪ್ರಾಯದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿಯೂ ಚರ್ಚೆಯಾಗುತ್ತಿದೆ. ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಪರವಾಗಿರುವ ಕೆಲವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ಧನ್ವೀರ್ ತಂದೆಯೂ ವಿಜಯಲಕ್ಷ್ಮಿ ವಿರುದ್ಧ ಬೆದರಿಕೆ ಆರೋಪ ಮಾಡಿದ್ದಾರೆ.

ಇದೀಗ ವಿಜಯಲಕ್ಷ್ಮಿ ಮತ್ತು ಝೈದ್ ಖಾನ್ ಜೈಲಿಗೆ ಭೇಟಿ ನೀಡಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಧನ್ವೀರ್‌ಗೆ ಸಂಬಂಧಿಸಿದ ವಿವಾದದ ಬಗ್ಗೆ ದರ್ಶನ್ ಜೊತೆ ಚರ್ಚೆ ನಡೆಯುತ್ತದೆಯೇ? ವೈರಲ್ ಆಗಿರುವ ಆಡಿಯೋಗಳ ಕುರಿತು ಮಾತುಕತೆ ನಡೆಯಲಿದೆಯೇ? ಈ ಭೇಟಿಯ ಬಳಿಕ ಯಾವುದೇ ಪ್ರತಿಕ್ರಿಯೆ ಹೊರಬೀಳುತ್ತದೆಯೇ ಎಂಬ ಕುತೂಹಲ ಮೂಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button