Election NewsKarnataka NewsLatestPolitics

*ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಫಲಿತಾಂಶ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ತೀವ್ರ ಕುತೂಹಲ ಮೂಡಿಸಿದ್ದ ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ.

ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಸೋಲನುಭವಿಸಿದ್ದು, ಎನ್‌ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್‌ ಜಯಭೇರಿ ಬಾರಿಸಿದ್ದಾರೆ. ಜೆಡೆಸ್-ಬಿಜೆಪಿ ಕಾಅರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 27,405 ಮತದಾರರಿದ್ದು, 22,468 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ ಎನ್ ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ 10,810 ವೋಟ್​​ ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರ 9,902 ಮತಗಳು ಬಂದಿವೆ. ಅಂತಿಮವಾಗಿ 908 ಮತಗಳ ಅಂತರದಲ್ಲಿ ಎನ್​​ಡಿಎ ಅಭ್ಯರ್ಥಿ ಗೆದ್ದು ಬೀಗಿದ್ದಾರೆ.

ಚಲಾವಣೆಯಾಗಿದ್ದ ಒಟ್ಟು ಮತಗಳ ಪೈಕಿ 20,611 ಸಿಂಧುವಾಗಿದ್ದರೆ, 1,857 ಅಸಿಂಧುವಾಗಿವೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button