Film & EntertainmentKannada NewsKarnataka News

*ನಟ ಧ್ವನ್ವೀರ್ ವಿರುದ್ಧ ಎರಡು FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್‌ವುಡ್ ನಟ ಧನ್ವೀರ್‌ ಹಾಗೂ ವಿಜಯಲಕ್ಷ್ಮೀ ದರ್ಶನ್ ನಡುವಿನ ಸಂಘರ್ಷದ ಬೆನ್ನಲ್ಲೇ ಧನ್ವೀರ್ ಗೆ ಕಾನೂನು ಸಂಕಷ್ಟ ಎದುರಾಗಿದೆ.

ಜೀವ ಬೆದರಿಕೆ, ನಿಂದನೆ ಮತ್ತು ಶಾಂತಿಭಂಗದ ಆರೋಪಗಳಡಿ ರಾಜರಾಜೇಶ್ವರಿನಗರ ಹಾಗೂ ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ನಟನ ವಿರುದ್ಧ ಪ್ರತ್ಯೇಕ ಎರಡು ಎಫ್‌ಐಆರ್ ದಾಖಲಾಗಿವೆ.

ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ನೀಡಿದ ದೂರಿನನ್ವಯ ಒಂದು ಪ್ರಕರಣ ದಾಖಲಾಗಿದೆ. ನಿರ್ಮಾಪಕ ಭೋಜರಾಜ ರೈ ಎಂಬುವವರು ನೀಡಿದ ದೂರಿನ ಮೇರೆಗೆ ಬಸವೇಶ್ವರನಗರ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಕಳೆದ ತಿಂಗಳ 20ರಂದು ಭೋಜರಾಜ್ ಅವರು ನಟ ಧನ್ವೀರ್ ಮನೆಗೆ ತೆರಳಿ ಅಲ್ಲಿಂದ ನಾಗರಾಜ್ ಅವರನ್ನು ಕರೆತಂದಿದ್ದರು ಎನ್ನಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ನಟ ಧನ್ವೀರ್, ಭೋಜರಾಜ ಅವರಿಗೆ ಫೋನ್ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಆರಂಭದಲ್ಲಿ ಎರಡು ಕಡೆ ಪೊಲೀಸರು ಎನ್‌ಸಿಆರ್ ದಾಖಲು ಮಾಡಿಕೊಂಡಿದ್ದರು. ಈಗ ಕೋರ್ಟ್ ಸೂಚನೆಯಂತೆ ಎರಡು ಕಡೆ ಬೆದರಿಕೆ ಆರೋಪದಡಿಯಲ್ಲಿ ಎಫ್ ಐಆರ್ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button