Kannada NewsKarnataka NewsLatestPolitics

*‘ಬಾಂಬೆ ಡೇಸ್’ ಪುಸ್ತಕ ಬಿಡುಗಡೆ ಮಾಡಲ್ಲ*: *ಹೆಚ್‌.ವಿಶ್ವನಾಥ್‌*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣದ ಚರ್ಚೆ ಜೋರಾಗಿರುವ ಬೆನ್ನಲ್ಲೇ, ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ಮಹತ್ವದ ಹೇಳಿಕೆ ನೀಡಿದ್ದಾರೆ. ತಾವು ಸಂಪೂರ್ಣವಾಗಿ ಬರೆದಿರುವ ‘ಬಾಂಬೆ ಡೇಸ್’ ಪುಸ್ತಕವನ್ನು ಬಿಡುಗಡೆ ಮಾಡದಿರಲು ನಿರ್ಧರಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಪುಸ್ತಕ ಪ್ರಕಟಿಸಿದರೆ ರಾಜಕೀಯದ ಬಗ್ಗೆ ಜನರಲ್ಲಿ ಇನ್ನಷ್ಟು ಅಸಹ್ಯ ಮೂಡಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ವಿಶ್ವನಾಥ್, ‘ಬಾಂಬೆ ಡೇಸ್’ ಪುಸ್ತಕವನ್ನು ಸಂಪೂರ್ಣವಾಗಿ ಬರೆದಿದ್ದೇನೆ. ಆದರೆ, ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದೇನೆ. ಈಗಾಗಲೇ ಜನ ರಾಜಕೀಯದ ಬಗ್ಗೆ ಅಸಹ್ಯ ಭಾವನೆ ಹೊಂದಿದ್ದಾರೆ. ಮತ್ತಷ್ಟು ಅಸಹ್ಯ ಮೂಡಿಸುವುದು ತಮಗೆ ಇಷ್ಟವಿಲ್ಲ. ಹೀಗಾಗಿ ಪುಸ್ತಕ ಬಿಡುಗಡೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ತಮ್ಮ ವಿರುದ್ಧದ ಆರೋಪಗಳೆಲ್ಲವೂ ಕಟ್ಟುಕಥೆ ಎಂದು ಹೇಳಿದ್ದು, ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button