Kannada NewsKarnataka NewsLatest

*ಕರ್ತವ್ಯನಿರತ 362 KAS ಅಧಿಕಾರಿಗಳಿಗೆ ಬಿಗ್ ಶಾಕ್*: *ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ವಿವಾದದಕ್ಕೆ ಸಂಬಂಧಿಸಿದಂತೆ ರಾಅಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ.

362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ವಿವಾದದ ಬಗ್ಗೆ ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ , ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಕಾಯ್ದೆಯನ್ನು ರದ್ದುಗೊಳಿಸಿದೆ. ಇದರಿಂದಾಗಿ 362 ಕೆ.ಎ.ಎಸ್ ಅಧಿಕಾರಿಗಳ ಸ್ಥಿತಿ ಇದೀಗ ಅತಂತ್ರವಾಗಲಿದೆ.

ನೇಮಕಾತಿ ಪಟ್ಟಿಯನ್ನು ಊರ್ಜಿತಗೊಳಿಸಲು ರಾಜ್ಯ ಸರ್ಕಾರ 2022ರಲ್ಲಿ ಜಾರಿಗೆ ತಂದಿದ್ದ ಕಾಯ್ದೆಯನ್ನೇ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಕರ್ತವ್ಯದಲ್ಲಿರುವ 362 ಕೆಎಎಸ್ ಅಧಿಕಾರಿಗಳ ನೌಕರಿಗೆ ನೇರ ಕುತ್ತು ಬಂದಿದೆ.

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಹಾಗೂ ವಿನೋದ್ ಚಂದ್ರನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಗುರುವಾರ ಈ ಮಹತ್ವದ ಆದೇಶವನ್ನು ಪ್ರಕಟಿಸಿದೆ. 2011ರ ಸಾಲಿನ ಕೆಪಿಎಸ್‌ಸಿ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕಾರಣದಿಂದ ಈ ಹಿಂದೆ ಹೈಕೋರ್ಟ್ ಆಯ್ಕೆ ಪಟ್ಟಿಯನ್ನು ರದ್ದುಪಡಿಸಿತ್ತು. ಆದರೆ ಈ ಆಯ್ಕೆ ಪಟ್ಟಿಯನ್ನು ರಕ್ಷಿಸುವ ಸಲುವಾಗಿ ರಾಜ್ಯ ಸರ್ಕಾರವು 2022ರಲ್ಲಿ ವಿಶೇಷ ಕಾಯ್ದೆಯನ್ನು ಜಾರಿಗೆ ತಂದಿತ್ತು. ಸರ್ಕಾರದ ಈ ಕಾಯ್ದೆಯನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.

ಹೈಕೋರ್ಟ್‌ನ ಈ ನಿರ್ಧಾರವನ್ನು ಪ್ರಶ್ನಿಸಿ ಮೂಲ ಅರ್ಜಿದಾರರಾದ ಶ್ರೀನಿವಾಸ ಟಿ. ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಪೀಠವು, ಇಂದು ಸರ್ಕಾರದ ಕಾಯ್ದೆಯನ್ನು ಸಂಪೂರ್ಣವಾಗಿ ಅಸಿಂಧುಗೊಳಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button