Kannada NewsKarnataka NewsLatest

*ಅಪಘಾತದಲ್ಲಿ ಗಾಯಗೊಂಡಿದ್ದ ಹೆಡ್ ಕಾನ್ಸ್ ಟೇಬಲ್ ಚಿಕಿತ್ಸೆ ಫಲಿಸದೇ ಸಾವು*

ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕಾರಿಪುರ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಬ್ ಘಟನೆ ನಡೆದಿದೆ.

ಗಿರೀಶ್ ಕುಮಾರ್‌ (33) ಮೃತ ಹೆಡ್ ಕಾನ್ಸ್ ಟೇಬಲ್. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ಶಿಕಾರಿಪುರದ ಸಾಲೂರು ಗ್ರಾಮದ ನಿವಾಸಿ ಗಿರೀಶ್ ಕುಮಾರ್‌ ಚಿಕ್ಕಾಪುರ ಕ್ರಾಸ್ ಬಳಿ 2 ವಾರಗಳ ಹಿಂದೆ ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭಿರವಾಗಿ ಗಾಯಗೊಂಡಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್‌ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button