*ಬೆಳಗಾವಿಯಲ್ಲಿ ಎಸ್ಸಿ/ಎಸ್ಟಿ ಕುಂದುಕೊರತೆ ಸಭೆ ನಡೆಸಿದ ಪೊಲೀಸ್ ಆಯುಕ್ತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್ಸಿ/ಎಸ್ಟಿ) ಮಾಸಿಕ ಕುಂದುಕೊರತೆ ಸಭೆ ಇಂದು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಸುಮಾರು 100ರಿಂದ 120 ಮಂದಿ ಎಸ್ಸಿ/ಎಸ್ಟಿ ಮುಖಂಡರು ಹಾಗೂ ಸದಸ್ಯರು ಭಾಗವಹಿಸಿ ತಮ್ಮ ವಿವಿಧ ಸಮಸ್ಯೆಗಳನ್ನು ಪೊಲೀಸ್ ಆಯುಕ್ತರ ಗಮನಕ್ಕೆ ತಂದರು. ಸಭೆಯಲ್ಲಿ ಪ್ರಸ್ತಾಪಿಸಲಾದ ಎಲ್ಲ ಸಮಸ್ಯೆಗಳನ್ನು ಪೊಲೀಸ್ ಆಯುಕ್ತರು ಸುದೀರ್ಘವಾಗಿ ಆಲಿಸಿದರು.
ಪೊಲೀಸ್ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ತಕ್ಷಣವೇ ಬಗೆಹರಿಸುವಂತೆ ಸಭೆಯಲ್ಲಿ ಉಪಸ್ಥಿತರಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇನ್ನುಳಿದಂತೆ ಇತರ ಇಲಾಖೆಗಳ ವ್ಯಾಪ್ತಿಗೆ ಬರುವ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಪತ್ರದ ಮೂಲಕ ಕಳುಹಿಸಿ, ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು.
ಸಭೆಯಲ್ಲಿ ನಗರದ ಡಿಸಿಪಿಗಳಾದ (ಕಾ.ಮತ್ತು ಸು.) ಹಾಗೂ (ಅ.ಮತ್ತು ಸಂ.) ವಿಭಾಗದ ಅಧಿಕಾರಿಗಳು, ಎಲ್ಲ ಉಪವಿಭಾಗಗಳ ಎಸಿಪಿಗಳು, ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ಗಳು, ಡಿಸಿಆರ್ಇ ಪೊಲೀಸ್ ಠಾಣೆಯ ಅಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಎಸ್ಸಿ/ಎಸ್ಟಿ ಸಮುದಾಯದ ಮುಖಂಡರು ಮತ್ತು ಸದಸ್ಯರ ಅಹವಾಲುಗಳನ್ನು ಆಲಿಸಿ, ಸಂಬಂಧಪಟ್ಟ ಇಲಾಖೆಗಳ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದು ಸಭೆಯ ಪ್ರಮುಖ ಉದ್ದೇಶವಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




